Advertisement
ಹಬ್ಬದ ನಿಮಿತ್ತ ಮನೆಯ ಎದುರಿನ ಬಾಗಿಲು, ದೇವರ ಮನೆಯ ಬಾಗಿಲಿಗೆ ಮಾವಿನ ಎಲೆಗಳ ಹಾರ, ತಳಿರು ತೋರಣ ಹಾಕಿ ಹೂವಿನ ಅಲಂಕಾರ ಮಾಡಲಾಗಿತ್ತು. ಯುಗಾದಿ ದಿನದಂದು ಸಂತೋಷದ ಪ್ರತೀಕವಾಗಿ ಬೆಲ್ಲವನ್ನೂ ಮತ್ತು ಕಷ್ಟದ ಸಂಕೇತವಾಗಿ ಬೇವನ್ನು ಬೆರೆಸಿ ಪ್ರಸಾದ ಸೇವಿಸಿದರು. ಹೊಸ ವರ್ಷದ ಮೊದಲ ದಿನ ತಮ್ಮ ಹೊಲಗಳಲ್ಲಿ ಉಳುಮೆ ಕಾರ್ಯ ಮಾಡಿದರೆ ವರ್ಷಪೂರ್ತಿ ಉತ್ತಮವಾದ ಮಳೆ ಬೆಳೆ ಬರುತ್ತದೆ ಎಂಬ ನಂಬಿಕೆಯಿಂದ ರೈತರು ಹೊಸ ಬಟ್ಟೆ ಧರಿಸಿ ಗ್ರಾಮದ ಪ್ರಮುಖ ದೇವಸ್ಥಾನಗಳಿಗೆ ತೆರಳಿ ಆಶೀರ್ವಾದ ಪಡೆದು ಬಳಿಕ ಹೊಲಗಳಿಗೆ ಹೋಗಿ ಹಣ್ಣು-ಕಾಯಿ ಒಡೆದು, ಪೂಜೆ ಸಲ್ಲಿಸಿ ನೇಗಿಲು ಹೊಡೆದರು.
Related Articles
Advertisement
ಪುರಸಿದ್ದೇಶ್ವರ ರಥೋತ್ಸವ: ಪ್ರಸಕ್ತ ವರ್ಷ ಕೋವಿಡ್-19ರ ಹಿನ್ನೆಲೆಯಲ್ಲಿ ನಗರದ ಪುರಸಿದ್ದೇಶ್ವರ ಜಾತ್ರಾ ಮಹೋತ್ಸವ ಮಂಗಳವಾರ ಸರಳವಾಗಿ ಜರುಗಿತು. ಸಂಜೆ ನಡೆದ ರಥೋತ್ಸವದಲ್ಲಿ ಭಕ್ತಾದಿಗಳು ಪಾಲ್ಗೊಂಡು ಧನ್ಯತಾ ಭಾವ ಮೆರೆದರು. ವಿವಿಧ ಹೂವಿನ ಮಾಲೆ, ವಿದ್ಯುತ್ ದೀಪಗಳಿಂದ ಅಲಂಕರಿಸಿದ ರಥದಲ್ಲಿ ಪುರಸಿದ್ದೇಶ್ವರ ದೇವರ ಮೂರ್ತಿ ಪ್ರತಿಷ್ಠಾಪಿಸಿ ವಿವಿಧ ಜಯಘೋಷಗಳೊಂದಿಗೆ ರಥೋತ್ಸವ ಎಳೆಯಲಾಯಿತು. ಪುರಸಿದ್ದೇಶ್ವರ ದೇವಸ್ಥಾನದ ಬಳಿ ಹುಕ್ಕೇರಿಮಠದ ಸದಾಶಿವ ಶ್ರೀಗಳು ರಥೋತ್ಸವಕ್ಕೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಶಾಸಕ ನೆಹರು ಓಲೇಕಾರ, ಶಿವಬಸಪ್ಪ ಜಾಬಿನ್, ಪ್ರಭು ಹಿಟ್ನಳ್ಳಿ, ಮಲ್ಲಿಕಾರ್ಜುನ್ ಸಾತೇನಹಳ್ಳಿ, ಶಿವಲಿಂಗಪ್ಪ ಕಲ್ಯಾಣಿ, ಗಿರೀಶ ಗುಮ್ಮಕಾರ, ಗುರಣ್ಣ ಸೀಮಿಕೇರಿ, ವಿರುಪಾಕ್ಷಪ್ಪ ಹತ್ತಿಮತ್ತೂರ, ಶಂಭಣ್ಣ ಖೌದಿ, ಅಶೋಕ ಕಂಡೆವಾಲ್ ಸೇರಿದಂತೆ ಭಕ್ತಾದಿಗಳು ಭಾಗವಹಿಸಿದ್ದರು.