ಮಂಗಳೂರು: ಯುವನಿಧಿ ಯೋಜನೆಯಡಿ 2023ನೇ ಸಾಲಿನಲ್ಲಿ ಪದವೀಧರರಿಗೆ ಮತ್ತು ಡಿಪ್ಲೊಮಾ ಉತ್ತೀರ್ಣರಾಗಿ ಉದ್ಯೋಗ ದೊರಕದ ಅಭ್ಯರ್ಥಿಗಳಿಗೆ ಪದವಿ ಅಭ್ಯರ್ಥಿಗಳಿಗೆ ಮಾಸಿಕ 3 ಸಾವಿರ ರೂ. ಹಾಗೂ ಡಿಪ್ಲೊಮಾ ಅಭ್ಯರ್ಥಿಗಳಿಗೆ ಮಾಸಿಕ 1,500 ರೂ. ನಿರುದ್ಯೋಗ ಭತ್ತೆಯನ್ನು ನೀಡಲಾಗುತ್ತದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನೋಂದಣಿಗೆ ಉತ್ತಮ ಪ್ರತಿಕ್ರಿಯೆ ದೊರಕಿದ್ದು, ಈಗಾಗಲೇ 1,700ಕ್ಕೂ ಹೆಚ್ಚಿನ ಯುವಕ ಯುವತಿಯರು ಈ ಯೋಜನೆಯಡಿ ನೋಂದಾಯಿಸಿಕೊಂಡಿದ್ದಾರೆ.
ಜ. 12ರಂದು ಸ್ವಾಮಿ ವಿವೇಕಾನಂದ ಜಯಂತಿಯ ಪ್ರಯುಕ ¤ರಾಷ್ಟ್ರೀಯ ಯುವ ದಿನದಂದು ಶಿವಮೊಗ್ಗ ಫ್ರೀಡಂ ಪಾರ್ಕ್‌ನಲ್ಲಿ ಮುಖ್ಯಮಂತ್ರಿಗಳ ಉಪಸ್ಥಿತಿಯಲ್ಲಿ ಯುವ ನಿಧಿ ಫಲಾನುಭವಿಗಳಿಗೆ ನೇರ ನಗದು ವರ್ಗಾವಣೆ ಕಾರ್ಯಕ್ರಮ ನಡೆಯಲಿದೆ. ಜಿಲ್ಲೆಯಲ್ಲಿ ಈ ಯೋಜನೆಯಡಿ ನೋಂದಾಯಿಸಿರುವ ಅಭ್ಯರ್ಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಜಿಲ್ಲಾ ಉದ್ಯೋಗಾಧಿಕಾರಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ವಿದ್ಯಾರ್ಥಿಗಳ ಬಳಕೆಗೆ
ಯಶ್‌ಪಾಲ್ ಆಕ್ರೋಶ
ಉಡುಪಿ: ಶಿವಮೊಗ್ಗದ ಕಾರ್ಯ ಕ್ರಮದಲ್ಲಿ ಉಡುಪಿ ಜಿಲ್ಲೆಯ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು ಕಡ್ಡಾಯ
ಭಾಗವಹಿಸುವಂತೆ ಒತ್ತಡ ಹೇರುತ್ತಿರುವ ರಾಜ್ಯ ಸರಕಾರದ ಕ್ರಮಕ್ಕೆ ಶಾಸಕ ಯಶ್‌ಪಾಲ್ ಸುವರ್ಣ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಚುನಾವಣೆಯಲ್ಲಿ ಘೋಷಿಸಿರುವ ಯುವನಿಧಿ ಕಾರ್ಯಕ್ರಮ ಅಧಿಕಾರಕ್ಕೆ ಬಂದು 7 ತಿಂಗಳು ಕಳೆದರೂ ಅನುಷ್ಠಾನ ಮಾಡದ ರಾಜ್ಯ ಸರಕಾರ ಇದೀಗ ಲೋಕಸಭಾ ಚುನಾವಣೆಯ ಹೊಸ್ತಿಲಲ್ಲಿ ಹಲವು ಕಠಿನ ಷರತ್ತು ಹಾಕಿ ಯೋಜನೆಗೆ ಚಾಲನೆ ನೀಡಿ ಲಾಭ ಪಡೆಯುವ ಹುನ್ನಾರ ನಡೆಸುತ್ತಿದ್ದು, ರಾಜಕೀಯ ಪ್ರೇರಿತ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳನ್ನು ಬಳಸಿಕೊಳ್ಳುತ್ತಿರುವುದು ಖಂಡನೀಯ. ಸರಕಾರ ಈ ನಿರ್ಧಾರ ತಕ್ಷಣ ಕೈಬಿಡಬೇಕು. ತಪ್ಪಿದಲ್ಲಿ ವಿದ್ಯಾರ್ಥಿ ಸಂಘಟನೆಗಳ ಮೂಲಕ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ.
ಬಸ್ ಸಂಚಾರ ವ್ಯತ್ಯಯ
ಮಂಗಳೂರು: ಯುವನಿಧಿ ಯೋಜನೆ ಉದ್ಘಾಟನೆ ಕಾರ್ಯಕ್ರಮಕ್ಕಾಗಿ ಜ. 12ರಂದು ಕೆಎಸ್ಸಾರ್ಟಿಸಿ ಮಂಗಳೂರು ವಿಭಾಗದಿಂದ ಬಸ್‌ಗಳನ್ನು ಸಾಂದರ್ಭಿಕ ಒಪ್ಪಂದದ ಮೇರೆಗೆ ನಿಯೋಜಿಸಲಾಗಿರುತ್ತದೆ.
ಜ. 11ರಂದು ಬಸ್‌ಗಳ ಕಾರ್ಯಾಚರಣೆಯಲ್ಲಿ ಸ್ವಲ್ಪ ಮಟ್ಟಿನ ವ್ಯತ್ಯಯ ಉಂಟಾಗಲಿದೆ ಎಂದು ಹಿರಿಯ ಭಾಗೀಯ ನಿಯಂತ್ರಣಾಧಿಕಾರಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.