Advertisement

Yuva Nidhi Scheme: ಪ್ರತಿ ತಿಂಗಳು ಸ್ವಯಂ ಘೋಷಣೆ ಕಡ್ಡಾಯ

12:39 AM Jul 24, 2024 | Team Udayavani |

ಉಡುಪಿ: ರಾಜ್ಯ ಸರಕಾರದ ಯುವನಿಧಿ ಯೋಜನೆಗೆ ನೋಂದಣಿ ಚಾಲ್ತಿಯಲ್ಲಿದ್ದು, ಅರ್ಹರು ಸೇವಾ ಸಿಂಧು ಪೋರ್ಟಲ್‌ನಲ್ಲಿ ಆನ್‌ಲೈನ್‌ ಮೂಲಕ ನೋಂದಣಿ ಮಾಡಿಕೊಳ್ಳಬಹುದು.

Advertisement

2022-23ನೇ ಹಾಗೂ ಅನಂತರದ ಸಾಲಿನಲ್ಲಿ ಪದವಿ, ಸ್ನಾತಕೋತ್ತರ ಪದವಿ (ವೃತ್ತಿಪರ ಸೇರಿದಂತೆ) ಹಾಗೂ ಯಾವುದೇ ಡಿಪ್ಲೊಮಾ ಪಡೆದು ನಿರುದ್ಯೋಗಿಯಾಗಿರುವವರು ಯುವನಿಧಿ ಯೋಜನೆಯ ಮೂಲಕ ಪ್ರತಿ ತಿಂಗಳು ಪದವೀಧರ ನಿರುದ್ಯೋಗಿಗಳಿಗೆ 3,000 ರೂ., ಡಿಪ್ಲೊಮಾ ಪಡೆದ ನಿರುದ್ಯೋಗಿಗಳಿಗೆ 1,500 ರೂ. ನೇರ ನಗದು ಬ್ಯಾಂಕ್‌ ಖಾತೆಗೆ ಜಮಾ ಮಾಡಲಾಗುವುದು.

ಪ್ರತೀ ತಿಂಗಳು ಸ್ವಯಂ ಘೋಷಣೆ ಕಡ್ಡಾಯ

ಯುವನಿಧಿ ಯೋಜನೆಯ ಫ‌ಲಾನುಭವಿಗಳು ಪ್ರತೀ ತಿಂಗಳ 25ನೇ ತಾರೀಕಿನೊಳಗೆ ಆನ್‌ಲೈನ್‌ನಲ್ಲಿ ಲಾಗಿನ್‌ ಆಗಿ ಸ್ವಯಂ ಘೋಷಣೆ ನೀಡಬೇಕು. ಸ್ವಯಂ ಘೋಷಣೆ ನೀಡದಿದ್ದಲ್ಲಿ ಆ ತಿಂಗಳ ನೇರ ನಗದು ಖಾತೆಗೆ ಜಮೆಯಾಗುವುದಿಲ್ಲ. ಆದ್ದರಿಂದ ಫ‌ಲಾನುಭವಿಗಳು ತಪ್ಪದೇ ಸೇವಾ ಸಿಂಧು ಪೋರ್ಟಲ್‌ನಲ್ಲಿ ಆನ್‌ಲೈನ್‌ ಮೂಲಕ ಪ್ರತೀ ತಿಂಗಳು ಸ್ವಯಂ ಘೋಷಣೆ ನೀಡಬೇಕು. ಮಾಹಿತಿಗೆ ರಜತಾದ್ರಿಯ ಜಿಲ್ಲಾ ಉದ್ಯೋಗಾಧಿಕಾರಿ ಕಚೇರಿಯನ್ನು ಸಂಪರ್ಕಿಸಲು ಪ್ರಕಟನೆ ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next