ಬೆಂಗಳೂರು: ನಟ ಯುವರಾಜ್ ಕುಮಾರ್ (Yuvaraj Kumar) ಸಲ್ಲಿಸಿದ್ದ ವಿಚ್ಛೇದನ ಅರ್ಜಿಯ ವಿಚಾರಣೆ ಗುರುವಾರ(ಜು.4ರಂದು) ನಡೆದಿದೆ.
ಬೆಂಗಳೂರಿನ 1 ಹೆಚ್ಚುವರಿ ಕೌಟುಂಬಿಕ ನ್ಯಾಯಾಲಯದಲ್ಲಿ ಅರ್ಜಿಯ ವಿಚಾರಣೆ ನಡೆದಿದೆ. ನ್ಯಾಯಾಧೀಶೆ ಕಲ್ಪನಾ ಅವರಿದ್ಧ ಪೀಠದಲ್ಲಿ ಅರ್ಜಿ ವಿಚಾರಣೆ ನಡೆಯಿತು.
ಅರ್ಜಿ ವಿಚಾರಣೆ ವೇಳೆ ಶ್ರೀದೇವಿ ಭೈರಪ್ಪ ಅವರ ಪರ ವಕೀಲರು ಆಕ್ಷೇಪಣೆ ಸಲ್ಲಿಕೆಗೆ ಅವಕಾಶ ನೀಡುವಂತೆ ಮನವಿ ಮಾಡಿದ್ದಾರೆ. ಮನವಿಗೆ ಸ್ಪಂದಿಸಿರುವ ನ್ಯಾಯಾಧೀಶೆ ಇದು ಕೌಟುಂಬಿಕ ಕಲಹವಾಗಿರುವ ಕಾರಣದಿಂದ ಮೊದಲು ಈ ಪ್ರಕರಣದ ಮಿಡಿಯೇಷನ್ ಕೌನ್ಸಿಲಿಂಗ್ ಮುಕ್ತಾಯವಾಗಲಿ. ಕೌನ್ಸಿಲಿಂಗ್ ಮುಕ್ತಾಯದ ಬಳಿಕ ಇಬ್ಬರ ತೀರ್ಮಾನ ಕೇಳಬೇಕು. ಬಳಿಕ ವಿಚ್ಚೇದನದ ಆಕ್ಷೇಪಣೆ ಕೇಳುವುದಾಗಿ ಹೇಳಿ ವಿಚಾರಣೆಯನ್ನು ಆ.23 ಕ್ಕೆ ಮಿಡಿಯೇಷನ್ ದಿನಾಂಕ ನಿಗದಿ ಮಾಡಿ ವಿಚಾರಣೆ ಮುಂದೂಡಿದೆ.
ಇದನ್ನೂ ಓದಿ: ನನ್ನ ಮೇಲೆ ಮಾಡಿರುವ ಪ್ರತಿಯೊಂದು ಆರೋಪವೂ ಸುಳ್ಳು..ಏನೇ ಎದುರಾದರೂ ಹೆದರುವುದಿಲ್ಲ: ಶ್ರೀದೇವಿ
ಶ್ರೀದೇವಿ ಭೈರಪ್ಪ ಅವರು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ವೊಂದನ್ನು ಹಂಚಿಕೊಂಡಿದ್ದು,” ಸತ್ಯ ಮತ್ತು ನ್ಯಾಯ ಮೇಲುಗೈ ಸಾಧಿಸುತ್ತದೆ ಎಂದು ನಾನು ನಂಬಿದ್ದೇನೆ. ಹಾಗೂ ಅದಕ್ಕಾಗಿ ನಾನು ಹೋರಾಡುತ್ತೇನೆ ಎಂದು ಪುನರುಚ್ಚರಿಸುತ್ತೇನೆ. ನನ್ನ ಮೇಲೆ ಮಾಡಿರುವ ಪ್ರತಿಯೊಂದು ಸುಳ್ಳು ಆರೋಪದಿಂದ ಮುಕ್ತಳಾಗುವವರೆಗೆ ನನ್ನ ದಾರಿಗೆ ಏನೇ ಎದುರಾದರೂ ಹೆದರುವುದಿಲ್ಲ” ಎಂದು ಹೇಳಿದ್ದಾರೆ.
ಹಾರ್ವರ್ಡ್‌ನಲ್ಲಿ ನಾನು ಒಂದು ಶೈಕ್ಷಣಿಕ ಯೋಜನೆಯನ್ನು ಶುರುಮಾಡಿದ್ದು, ಆ ಕಾಯಕವನ್ನು ಮುಂದುವರೆಸಲು ನಾನು ಅಮೆರಿಕಗೆ ಹಿಂತಿರುಗುತ್ತಿದ್ದೇನೆ. ಈ ಸಮಯವು ನನಗೆ ಇನ್ನಷ್ಟು ಕಲಿಯಲು, ಬೆಳೆಯಲು ಮತ್ತು ಎಲ್ಲಾ ಆಘಾತಗಳಿಂದ ಗುಣಮುಖಳಾಗಲು ಸಹಾಯ ಮಾಡುತ್ತದೆ ಎಂದು ನಾನು ನಂಬಿದ್ದೇನೆ. ಸರಿಯಾದ ಸಮಯ ಬಂದಾಗ ನಾನು ಹಿಂತಿರುಗುತ್ತೇನೆ ಮತ್ತು ಇಲ್ಲಿನ ಕೆಲಸಗಳನ್ನು ಮುಂದುವರೆಸುತ್ತೇನೆ. ದೇವರ ಆಶೀರ್ವಾದ ಸದಾ ಎಲ್ಲರ ಮೇಲೆ ಇರಲಿ” ಎಂದು ಪೋಸ್ಟ್ ನಲ್ಲಿ ಹೇಳಿದ್ದಾರೆ.