ಸ್ವಾಮಿ ವಿವೇಕಾನಂದರ ಜನ್ಮದಿನವಾದ ಜ. 12ರಂದು ನಡೆಯುವ ಈ ಐತಿಹಾಸಿಕ ಸಮಾರಂಭಕ್ಕೆ ಶಿವಮೊಗ್ಗದ ಹೃದಯ ಭಾಗ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ವೇದಿಕೆ ನಿರ್ಮಾಣವಾಗಿದೆ. ಕಾರ್ಯಕ್ರಮಕ್ಕೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್, ಸಚಿವರಾದ ಮಧು ಬಂಗಾರಪ್ಪ, ಡಾ| ಶರಣ ಪ್ರಕಾಶ್ ಪಾಟೀಲ್, ಡಾ| ಎಂ.ಸಿ. ಸುಧಾಕರ್ ಸಹಿತ ಹಲವು ಸಚಿವರು, ಶಾಸಕರು, ಅಧಿ ಕಾರಿಗಳು ಚಾಲನೆ ನೀಡಲಿದ್ದಾರೆ. ಬೆಳಗ್ಗೆ 12 ಗಂಟೆಗೆ ಕಾರ್ಯಕ್ರಮ ಆರಂಭವಾಗಲಿದ್ದು, ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು, ಉಡುಪಿ ಹಾಗೂ ಹಾವೇರಿ ಜಿಲ್ಲೆಗಳಿಂದ ಒಂದು ಲಕ್ಷಕ್ಕೂ ಅ ಧಿಕ ಯುವನಿ ಧಿ ಹಾಗೂ ಗ್ಯಾರಂಟಿ ಫಲಾನುಭವಿಗಳು ಭಾಗವಹಿಸುವ ನಿರೀಕ್ಷೆ ಇದೆ.
Advertisement
ಶಿವಮೊಗ್ಗ ಹಾಗೂ ನೆರೆಯ ಜಿಲ್ಲೆಗಳಿಂದ ಕಾರ್ಯಕ್ರಮಕ್ಕೆ ಆಗಮಿಸುವ ಯುವ ವಿದ್ಯಾರ್ಥಿಗಳನ್ನು ಸಮಾರಂಭ ಸ್ಥಳಕ್ಕೆ ಕರೆತರಲು ಕೆಎಸ್ಸಾರ್ಟಿಸಿ, ಖಾಸಗಿ ಬಸ್ ಸೌಲಭ್ಯ ಕಲ್ಪಿಸಲಾಗಿದೆ. ಜಿಲ್ಲಾ ಪೊಲೀಸ್ ಇಲಾಖೆ ಕಾರ್ಯಕ್ರಮ ಸ್ಥಳಕ್ಕೆ ಬರಬೇಕಾದ ಮಾರ್ಗವನ್ನು ಗೂಗಲ್ ಮ್ಯಾಪ್ ಲಿಂಕ್ ಮಾಡಿದ್ದು ಇದರ ಮೂಲಕ ಯಾವುದೇ ತೊಡಕುಗಳಿಲ್ಲದೆ ಬರಬಹುದಾಗಿದೆ.
ಕಳೆದ ಮೂರು ದಿನಗಳಿಂದ ಜಿಲ್ಲೆಯಲ್ಲೇ ವಾಸ್ತವ್ಯ ಹೂಡಿರುವ ವೈದ್ಯಕೀಯ ಶಿಕ್ಷಣ ಸಚಿವ ಡಾ| ಶರಣಪ್ರಕಾಶ್ ಪಾಟೀಲ್ ಹಾಗೂ ಶಿಕ್ಷಣ ಹಾಗೂ ಶಿವಮೊಗ್ಗ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ವೇದಿಕೆಯ ಸಿದ್ಧತೆ, ಆಸನ ವ್ಯವಸ್ಥೆ, ವಾಹನ ನಿಲುಗಡೆ, ಊಟೋಪಾಚಾರ ಹಾಗೂ ಮೂಲಸೌಕರ್ಯ ಒದಗಿಸಲು ಅಗತ್ಯವಿರುವ ಎಲ್ಲ ಕ್ರಮಗಳ ಬಗ್ಗೆ ವಿಶೇಷ ನಿಗಾ ಇರಿಸಿದ್ದಾರೆ. ಏನಿದು ಯೋಜನೆ?
2023ರಲ್ಲಿ ಪದವಿ ಅಥವಾ ಡಿಪ್ಲೋಮಾ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ 2 ವರ್ಷಗಳ ವರೆಗೆ ನಿರುದ್ಯೋಗ ಭತ್ತೆ ನೀಡುವ ಯೋಜನೆ ಇದಾಗಿದೆ. ಅದರಂತೆ ಪದವೀಧರರಿಗೆ ಪ್ರತೀ ತಿಂಗಳು 3 ಸಾವಿರ ರೂ., ಡಿಪ್ಲೋಮಾ ಮಾಡಿದವರಿಗೆ 1,500 ರೂ.ಗಳನ್ನು ನೀಡಲಾಗುತ್ತದೆ. ಗರಿಷ್ಠ 2 ವರ್ಷಗಳವರೆಗೆ ಅಥವಾ ಕೆಲಸ ಸಿಗುವವರೆಗೆ ಈ ಭತ್ತೆ ಸಿಗಲಿದೆ.
Related Articles
ಆನ್‌ಲೈನ್‌ನಲ್ಲಿ ನೋಂದಣಿ ಮಾಡಿದವರು- 61,700
ಯಾರು ಅರ್ಹರು?
2023ರಲ್ಲಿ ಪದವಿ/ಡಿಪ್ಲೊಮಾ ಉತ್ತೀರ್ಣರಾದ ವಿದ್ಯಾರ್ಥಿಗಳು
ಪದವಿ/ಡಿಪ್ಲೋಮಾ ಮುಗಿಸಿದ ಬಳಿಕ ಕನಿಷ್ಠ 6 ತಿಂಗಳವರೆಗೆ ಸರಕಾರಿ ಅಥವಾ ಖಾಸಗಿ ಉದ್ಯೋಗ ಹೊಂದಿಲ್ಲದವರು
ಸ್ವಯಂ ಉದ್ಯೋಗ ಹೊಂದಿಲ್ಲದವರು
ಉನ್ನತ ವ್ಯಾಸಂಗ ಮುಂದುವರಿಸದೆ ಇರುವವರು
ಕರ್ನಾಟಕದಲ್ಲಿ ವಾಸವಿರುವವರು
ಯಾರು ಅರ್ಹರಲ್ಲ?
ಉನ್ನತ ವ್ಯಾಸಂಗಕ್ಕೆ ದಾಖಲಾತಿ ಪಡೆದು ವಿದ್ಯಾಭ್ಯಾಸ ಮುಂದುವರಿಸುವವರು
ಶಿಷ್ಯ ವೇತನ ಪಡೆಯುತ್ತಿರುವವರು
ಸರಕಾರಿ ಅಥವಾ ಖಾಸಗಿ ವಲಯದಲ್ಲಿ ಉದ್ಯೋಗ ಪಡೆದವರು
Advertisement
ನಮ್ಮದು ನುಡಿದಂತೆ ನಡೆಯುವ ಸರಕಾರ. ವಿಧಾನಸಭಾ ಚುನಾವಣೆಗೂ ಮುನ್ನ ಘೋಷಣೆ ಮಾಡಿದ್ದ ಐದೂ ಗ್ಯಾರಂಟಿಗಳನ್ನು ಅನುಷ್ಠಾನ ಮಾಡಿದ್ದೇವೆ. ದೇಶದ ಜನತೆ ಕರ್ನಾಟಕ ಮಾದರಿಯ ಆಡಳಿತ ಎದುರು ನೋಡುತ್ತಿದ್ದಾರೆ.– ಡಾ| ಶರಣ್ ಪ್ರಕಾಶ್ ಪಾಟೀಲ್, ವೈದ್ಯಕೀಯ ಶಿಕ್ಷಣ ಸಚಿವ