Advertisement

ಸತ್ಯ ಮತ್ತು ನ್ಯಾಯ ಮೇಲುಗೈ ಸಾಧಿಸುತ್ತದೆ: ಕುಟುಂಬದ ಗೌರವಕ್ಕಾಗಿ ಮೌನವಾಗಿದ್ದೆ: ಶ್ರೀದೇವಿ

12:03 AM Jun 11, 2024 | Team Udayavani |

ಬೆಂಗಳೂರು: ಯುವರಾಜ್ ಹಾಗೂ ಪತ್ನಿ ಶ್ರೀದೇವಿ ದಾಂಪತ್ಯ ಜೀವನ ವಿಚ್ವೇದನ ಹಂತಕ್ಕೆ ಬಂದು ತಲುಪಿದೆ.

Advertisement

ನಟ ಯುವರಾಜ್ ಕುಮಾರ್ ಫ್ಯಾಮಿಲಿ ಕೋರ್ಟಿಗೆ ಜೂ.6 ರಂದು ವಿಚ್ಚೇದನ ಅರ್ಜಿ ಸಲ್ಲಿಸಿದ್ದಾರೆ. ಈ ಬಗ್ಗೆ ಜುಲೈ 4 ರಂದು ಕೌಟುಂಬಿಕ ನ್ಯಾಯಾಲಯದಲ್ಲಿ ವಿಚಾರಣೆ ನಡೆಯಲಿದೆ.

ಮಾನಸಿಕ ಹಾಗೂ ದೈಹಿಕ ದೌರ್ಜನ್ಯದ ಆರೋಪಿಸಿ ಯುವರಾಜ್ ಕುಮಾರ್ ವಿಚ್ಚೇದನ ಅರ್ಜಿಯನ್ನು ಸಲ್ಲಿಸಿದ್ದಾರೆ.

ಉನ್ನತ ವ್ಯಾಸಂಗಕ್ಕಾಗಿ ಅಮೆರಿಕಾದಲ್ಲಿರುವ ಶ್ರೀದೇವಿ ತನಗೆ ಇನ್ನು ನೋಟಿಸ್ ತಲುಪಿಲ್ಲ. ಲೀಗಲ್ ನೋಟಿಸ್ ಗೆ ಉತ್ತರಿಸಿದ್ದೇನೆ. ನೋಟಿಸ್ ಪ್ರತಿ ಸಿಕ್ಕ ಬಳಿಕ ಅದಕ್ಕೆ ಉತ್ತರಿಸುತ್ತೇನೆ. ಸದ್ಯ ಈ ಬಗ್ಗೆ ಮಾತನಾಡುವ ಪರಿಸ್ಥಿತಿಯಲ್ಲಿ ನಾನಿಲ್ಲ ಎಂದು ಮಾಧ್ಯಮಗಳಿಗೆ ಶ್ರೀದೇವಿ ಹೇಳಿದ್ದಾರೆ.

ಈ ಬಗ್ಗೆ ಶ್ರೀದೇವಿ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ.

Advertisement

ವೃತ್ತಿಪರ ಸೌಹಾರ್ದತೆಯನ್ನು ಕಾಯ್ದುಕೊಳ್ಳಬೇಕಾದ ವ್ಯಕ್ತಿಯೇ ಸಾರ್ವಜನಿಕವಾಗಿ ಒಬ್ಬ ಹೆಣ್ಣಿನ ಚಾರಿತ್ರ್ಯದ ಬಗ್ಗೆ ಕೀಳು ಮಟ್ಟದ ಸುಳ್ಳು ಆರೋಪಗಳನ್ನು ಮಾಡುತ್ತಿರುವುದು ಅತ್ಯಂತ ದುರದೃಷ್ಟಕರ ಹಾಗೂ ಬಹಳ ನೋವುಂಟು ಮಾಡಿದೆ.

ಕಳೆದ ಕೆಲವು ತಿಂಗಳಿಂದ ಆದ ಅನೇಕ ನೋವುಗಳ ಹೊರತಾಗಿಯೂ, ನಾನು ಕುಟುಂಬದ ಗೌರವ ಕಾಪಾಡಿಕೊಳ್ಳಲು, ಮೌನವಾಗಿದ್ದೆ. ಆದರೆ ನನ್ನ ಸಭ್ಯತೆ ಹಾಗೂ ಮಾನವೀಯತೆಯನ್ನು ಗೌರವಿಸದೆ, ಕೀಳು ಮಟ್ಟದ ಆರೋಪಗಳನ್ನು ಮಾಡುತ್ತಿರುವುದು ದುರದೃಷ್ಟಕರ. ಸತ್ಯ ಮತ್ತು ನ್ಯಾಯವು ಖಂಡಿತ ಮೇಲುಗೈ ಸಾಧಿಸುತ್ತದೆ ಎಂದು ನಾನು ನಂಬಿದ್ದೇನೆ ಎಂದು ಪೋಸ್ಟ್ ಮಾಡಿದ್ದಾರೆ.

ಯುವರಾಜ್ -ಶ್ರೀದೇವಿ 7 ವರ್ಷಗಳ ಪ್ರೀತಿಸಿ 2019 ರಲ್ಲಿ ವಿವಾಹವಾಗಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next