Advertisement
ಚೆನ್ನೈಯಲ್ಲಿ ನಡೆದ ಈ ಪಂದ್ಯದಲ್ಲಿ ಯುವರಾಜ್ ಸಿಂಗ್ ಅನಾರೋಗ್ಯದ ನಡುವೆಯೂ ವಿಂಡೀಸ್ ವಿರುದ್ಧ “ಮ್ಯಾಚ್ ವಿನ್ನಿಂಗ್’ ಪ್ರದರ್ಶನ ನೀಡಿದ್ದರು. ಟಾಸ್ ಗೆದ್ದ ಭಾರತ ಮೊದಲು ಬ್ಯಾಟಿಂಗ್ ಆಯ್ದುಕೊಂಡಿತು. ಆದರೆ ಆರಂಭದಲ್ಲೇ 2 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತು. ಹಂತದಲ್ಲಿ ಯುವರಾಜ್ ಸಿಂಗ್ ಮತ್ತು ವಿರಾಟ್ ಕೊಹ್ಲಿ ತಂಡಕ್ಕೆ ಆಧಾರವಾಗಿ ನಿಂತಿದ್ದರು. ಈ ಜೋಡಿ 3ನೇ ವಿಕೆಟಿಗೆ 122 ರನ್ ಪೇರಿಸಿತು. 123 ಎಸೆತಗಳನ್ನು ಎದುರಿಸಿದ್ದ ಯುವರಾಜ್ ಸಿಂಗ್ 113 ರನ್ ಗಳಿಸಿದ್ದರು. ಇದು ವಿಶ್ವಕಪ್‌ನಲ್ಲಿ ಯುವರಾಜ್ ಬಾರಿಸಿದ ಮೊದಲ ಹಾಗೂ ಏಕೈಕ ಶತಕವಾಗಿದೆ. ಯುವಿ ಸಾಹಸದಿಂದ ಭಾರತ 268 ರನ್ ಪೇರಿಸುವಲ್ಲಿ ಯಶಸ್ವಿಯಾಗಿತ್ತು.
Related Articles
Advertisement
“ವಿಶ್ವಕಪ್‌ನಲ್ಲಿ ಶತಕ ಬಾರಿಸಬೇಕೆಂದು ನಾನು ಯಾವಾಗಲೂ ಅಂದುಕೊಳ್ಳುತ್ತಿದ್ದೆ. ಆದರೆ, ನಾನು 6ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡುತ್ತಿದ್ದರಿಂದ ಇದು ಸಾಧ್ಯವಾಗಿರಲಿಲ್ಲ. ಕೊನೆಗೂ ಆಸೆ ಈಡೇರಿತು. ಚೆನ್ನೈನಲ್ಲಿ ಉಷ್ಣಾಂಶ ಹೆಚ್ಚಿರುವುದರಿಂದ ನನಗೆ ವಾಂತಿ ಆಗಿರಬಹುದು ಎಂದು ಮೊದಲು ಭಾವಿಸಿದ್ದೆ. ಏನೇ ಆಗಲಿ, ಆ ಪಂದ್ಯದ ಬಳಿಕ ನಾನು ಸತ್ತರೂ ಭಾರತ ವಿಶ್ವಕಪ್ ಗೆಲ್ಲಲಿ ಎಂದು ಎಂದು ದೇವರಲ್ಲಿ ಪ್ರಾರ್ಥಿಸಿದ್ದೆ ಎಂದು ಯುವಿ ಹೇಳಿಕೊಂಡಿದ್ದರು.