ಹೈದರಾಬಾದ್: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ನಲ್ಲಿ ರಾಜಸ್ಥಾನ ರಾಯಲ್ಸ್ ಪರವಾಗಿ ಆಡುವ ಯುಜುವೇಂದ್ರ ಚಾಹಲ್ ಅವರು ರವಿವಾರ ಹೊಸ ಭಾರತೀಯ ದಾಖಲೆ ಬರೆದಿದ್ದಾರೆ. ಸನ್ ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ನಾಲ್ಕು ವಿಕೆಟ್ ಕಿತ್ತ ಚಾಹಲ್, ಟಿ20 ಕ್ರಿಕೆಟ್ ನಲ್ಲಿ 300 ವಿಕೆಟ್ ಪಡೆದ ಸಾಧನೆ ಮಾಡಿದ್ದಾರೆ. ಈ ಸಾಧನೆ ಮಾಡಿದ ಮೊದಲ ಭಾರತೀಯ ಬೌಲರ್ ಆಗಿದ್ದಾರೆ.
ರವಿವಾರ ಹೈದರಾಬಾದ್ ನಲ್ಲಿ ನಡೆದ ಪಂದ್ಯದಲ್ಲಿ ಚಾಹಲ್ ಅವರು ಕೇವಲ 17 ರನ್ ನೀಡಿ ನಾಲ್ಕು ವಿಕೆಟ್ ಕಿತ್ತರು. ಮಯಾಂಕ್ ಅಗರ್ವಾಲ್, ಹ್ಯಾರಿ ಬ್ರೂಕ್, ಆದಿಲ್ ರಶೀದ್ ಮತ್ತು ನಾಯಕ ಭುವನೇಶ್ವರ್ ಕುಮಾರ್ ವಿಕೆಟ್ ಗಳನ್ನು ಚಾಹಲ್ ಪಡೆದು ಸನ್ ರೈಸರ್ಸ್ ಹೈದರಾಬಾದ್ ಗೆ ಆಘಾತ ನೀಡಿದರು.
ಈಗ, 265 ಪಂದ್ಯಗಳಲ್ಲಿ ಚಾಹಲ್ 23.60 ರ ಸರಾಸರಿಯಲ್ಲಿ ಮತ್ತು 7.58 ರ ಎಕಾನಮಿ ರೇಟ್‌ನಲ್ಲಿ 303 ವಿಕೆಟ್‌ಗಳನ್ನು ಪಡೆದಿದ್ದಾರೆ. 25 ರನ್ ನೀಡಿದ ಆರು ವಿಕೆಟ್ ಪಡೆದಿದ್ದು ಟಿ20 ಕ್ರಿಕೆಟ್ ನಲ್ಲಿ ಅವರ ಅತ್ಯುತ್ತಮ ಬೌಲಿಂಗ್ ಫಿಗರ್. ಇವುಗಳಲ್ಲಿ 72 ಪಂದ್ಯಗಳನ್ನು ಅವರ ಭಾರತದ ಪರವಾಗಿ ಅಂತಾರಾಷ್ಟ್ರೀಯ ಟಿ20 ಯಲ್ಲಿ ಆಡಿದ್ದು, 5.26 ರ ಎಕಾನಮಿಯಲ್ಲಿ 121 ವಿಕೆಟ್ ಗಳನ್ನು ಪಡೆದಿದ್ದಾರೆ.
ಇದನ್ನೂ ಓದಿ:ಈ ಮೀನು ಸೇವಿಸಿ ಮಹಿಳೆ ಮೃತ್ಯು, ಪತಿ ಕೋಮಾದಲ್ಲಿ… ಅಷ್ಟಕ್ಕೂ ಆದದ್ದೇನು?
ಅಲ್ಲದೆ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಇತಿಹಾಸದಲ್ಲಿ ಮೂರನೇ ಅತಿ ಹೆಚ್ಚು ವಿಕೆಟ್ ಪಡೆದವರು. ಅವರು 132 ಐಪಿಎಲ್ ಪಂದ್ಯಗಳಲ್ಲಿ 21.41 ಸರಾಸರಿಯಲ್ಲಿ 170 ವಿಕೆಟ್ ಗಳನ್ನು ಪಡೆದಿದ್ದಾರೆ. ಅವರು ಲೀಗ್ ನಲ್ಲಿ ರಾಜಸ್ಥಾನ್ ರಾಯಲ್ಸ್, ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಮುಂಬೈ ಇಂಡಿಯನ್ಸ್ ತಂಡಗಳನ್ನು ಪ್ರತಿನಿಧಿಸಿದ್ದಾರೆ.