Advertisement

ಜಮೀರ್‌ ಅಹಮದ್‌ಗೆ ಲಘು ಹೃದಯಾಘಾತ

10:51 PM Oct 20, 2019 | Team Udayavani |

ಬೆಂಗಳೂರು: ಮಾಜಿ ಸಚಿವ ಜಮೀರ್‌ ಅಹಮದ್‌ ಖಾನ್‌ ಅವರಿಗೆ ಲಘು ಹೃದಯಾಘಾತವಾಗಿದ್ದು, ನಗರದ ವಿಕ್ರಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಶನಿವಾರ ಬೆಳಗ್ಗೆ 10 ಗಂಟೆ ಸುಮಾರಿಗೆ ಮನೆಯಲ್ಲಿದ್ದ ಜಮೀರ್‌ ಅವರಿಗೆ ಎದೆ ನೋವು ಕಾಣಿಸಿಕೊಂಡಿದ್ದು, ಕೂಡಲೇ ಅವರ ಪತ್ನಿ ಹಾಗೂ ಮಗ ಸಮೀಪದ ವಿಕ್ರಂ ಆಸ್ಪತ್ರೆಗೆ ದಾಖಲಿಸಿದ್ದಾರೆ. ವೈದ್ಯರು ಪರೀಕ್ಷಿಸಿ ಲಘು ಹೃದಯಾಘಾತ ವಾಗಿದೆ ಎಂದು ಖಚಿತಪಡಿಸಿದ್ದಾರೆ. ಸದ್ಯ ಜಮೀರ್‌ ಅವರಿಗೆ ಒಂದು ಸ್ಟಂಟ್‌ ಅಳವಡಿಸಲಾಗಿದೆ.

Advertisement

ಅವರು ಉತ್ತಮವಾಗಿ ಸ್ಪಂದಿಸುತ್ತಿದ್ದು, ಶೀಘ್ರ ಚೇತರಿಸಿಕೊಳ್ಳುತ್ತಿದ್ದಾರೆ. ಮಂಗಳ ವಾರ ಬೆಳಗ್ಗೆ ಅವರನ್ನು ಆಸ್ಪತ್ರೆ ಯಿಂದ ಡಿಸಾcರ್ಜ್‌ ಮಾಡಲಾಗುವುದು ಎಂದು ವೈದ್ಯರು ತಿಳಿಸಿದ್ದಾರೆ ಎಂದು ಆಪ್ತ ಮೂಲಗಳು ತಿಳಿಸಿವೆ.ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌, ಮಾಜಿ ಉಪ ಮುಖ್ಯಮಂತ್ರಿ ಜಿ.ಪರಮೇಶ್ವರ್‌ ಸೇರಿ ರಾಜಕೀಯ ಮುಖಂಡರು ಹಾಗೂ ಅಲ್ಪಸಂಖ್ಯಾತ ಆಯೋಗದ ಅಧ್ಯಕ್ಷ ಅಬ್ದುಲ್‌ ಅಜಿಂ ಅವರು ಆಸ್ಪತ್ರೆಗೆ ಭೇಟಿ ನೀಡಿ, ಜಮೀರ್‌ ಆರೋಗ್ಯ ವಿಚಾರಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next