Advertisement

Zameer Ahmed: ರಾಜ್ಯದಲ್ಲಿ ಬಿಜೆಪಿ ನಾಯಕರು ವಿನಾಕಾರಣ ಗೊಂದಲ ಸೃಷ್ಟಿಸಿದ್ದಾರೆ: ಜಮೀರ್

05:57 PM Nov 06, 2024 | Team Udayavani |

ಹುಬ್ಬಳ್ಳಿ: ಸಂಸತ್ತಿನ ಜಂಟಿ ಸಂಸದೀಯ ಸಮಿತಿ ರಚನೆಯಾಗಿರುವುದು ವಕ್ಫ್ ತಿದ್ದುಪಡಿ ಮಸೂದೆ ಕುರಿತು. ಆದರೆ ಇವರು ವಿಜಯಪುರಕ್ಕೆ ಬರುತ್ತಿರುವುದು ಅನಧಿಕೃತ ಎಂದು ಸಚಿವ ಜಮೀರ್ ಅಹ್ಮದ್ ತಿಳಿಸಿದರು.

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಮಿತಿ ರಚನೆ ಮಾಡುವ ಅಧಿಕಾರ ಕೇಂದ್ರ ಸರಕಾರಕ್ಕಿದೆ. ಆದರೆ ಜೆಪಿಸಿ ರಚಿಸಿರುವುದು ತಿದ್ದುಪಡಿ ಮಸೂದೆಗಾಗಿ ವಿನಃ ಇಲ್ಲಿ ವಕ್ಫ್ ಆಸ್ತಿ ವಿಚಾರವಾಗಿ ಅಲ್ಲ. ಇದರಲ್ಲಿ ಯಾವುದೇ ಗೊಂದಲ ಇರಲಿಲ್ಲ. ರಾಜ್ಯದಲ್ಲಿ ಬಿಜೆಪಿ ನಾಯಕರು ವಿನಾಕಾರಣ ಗೊಂದಲ ಸೃಷ್ಟಿಸಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಕೇಂದ್ರ ಸರಕಾರ ಬೇಕಾದರೆ ಸಮಿತಿ ಮಾಡಲಿ ಎಂದರು.

ಬಿಜೆಪಿಯವರಿಗೆ ಚುನಾವಣೆ ಮಾಡಲು ಯಾವುದೇ ವಿಚಾರಗಳಿಲ್ಲ. ಮುಖ್ಯಮಂತ್ರಿಗಳು ಸ್ಪಷ್ಟಪಡಿಸಿದರೂ ಇವರು ಹೋರಾಟ ಮಾಡುತ್ತಿರುವುದು ಚುನಾವಣೆ ಹಾಗೂ ರಾಜಕೀಯಕ್ಕಾಗಿ. ಪ್ರಮೋದ್ ಮುತಾಲಿಕ್, ಬಿಜೆಪಿ ಎರಡು ಒಂದೇ. ಏಕ್ ದಿಲ್ ದೋ ಜಾನ್ ತರಹ. ಅನ್ನ ನೀಡುವ ರೈತರಿಗೆ ತೊಂದರೆ ಕೊಟ್ಟಿಲ್ಲ, ಕೊಡುವುದಿಲ್ಲ. ರೈತರಿಗೆ ನೋಟಿಸ್ ಕೊಟ್ಟಿದ್ದಾರೆ ಅಂತ ಗೊಂದಲ ಸೃಷ್ಟಿ ಮಾಡಿದರು. ಹೀಗಾಗಿ ವಾಪಸ್ಸು ತೆಗೆದುಕೊಂಡಿದ್ದೇವೆ ಎಂದರು.

ಇದನ್ನೂ ಓದಿ: US Result: ಭಾರತೀಯ ಮೂಲದ ಉಷಾ ಚಿಲುಕುರಿ ಪತಿ ಜೆಡಿ ವಾನ್ಸ್ ಉಪಾಧ್ಯಕ್ಷ…ಟ್ರಂಪ್

Advertisement

Udayavani is now on Telegram. Click here to join our channel and stay updated with the latest news.

Next