Advertisement

ಆದಾಯ ಮೀರಿ ಆಸ್ತಿ ಗಳಿಕೆ ಆರೋಪ: ಜಮೀರ್‌ ಅಹ್ಮದ್‌ ಖಾನ್‌ಗೆ ಹಿನ್ನಡೆ

11:43 PM Apr 06, 2023 | Team Udayavani |

ಬೆಂಗಳೂರು : ಆದಾಯ ಮೀರಿ ಆಸ್ತಿ ಗಳಿಸಿದ ಆರೋಪ ಪ್ರಕರಣದಲ್ಲಿ ಕಾಂಗ್ರೆಸ್‌ ಶಾಸಕ ಜಮೀರ್‌ ಅಹ್ಮದ್‌ ಖಾನ್‌ಗೆ ಹಿನ್ನಡೆ ಆಗಿದ್ದು, ಪ್ರಕರಣಕ್ಕೆ ಸಂಬಂಧಿಸಿ ತಮ್ಮ ವಿರುದ್ಧ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ದಾಖಲಿಸಿರುವ ಎಫ್ಐಆರ್‌ಗೆ ತಡೆಯಾಜ್ಞೆ ನೀಡುವಂತೆ ಕೋರಿ ಅವರು ಸಲ್ಲಿಸಿದ್ದ ಮಧ್ಯಂತರ ಅರ್ಜಿಯನ್ನು ಹೈಕೋರ್ಟ್‌ ವಜಾಗೊಳಿಸಿದೆ.

Advertisement

ಪ್ರಕರಣ ರದ್ದುಪಡಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿ ಕಾಯ್ದಿರಿಸಿದ್ದ ತೀರ್ಪನ್ನು ಗುರುವಾರ ಪ್ರಕಟಿಸಿರುವ ನ್ಯಾಯಮೂರ್ತಿ ಕೆ. ನಟರಾಜನ್‌ ಅವರಿದ್ದ ಏಕಸದಸ್ಯ ನ್ಯಾಯಪೀಠ, ತಡೆ ನೀಡಲು ನಿರಾಕರಿಸಿ ಅರ್ಜಿಯನ್ನು ವಜಾಗೊಳಿಸಿ ಆದೇಶಿಸಿದೆ.

ವಿಚಾರಣೆ ವೇಳೆ ಶಾಸಕ ಜಮೀರ್‌ ಪರ ವಕೀಲ ಇಸ್ಮಾಯಿಲ್‌ ಜಬೀವುಲ್ಲಾ, ಅಕ್ರಮ ಆಸ್ತಿ ಗಳಿಕೆ ಆರೋಪ ಸಂಬಂಧ ಎಫ್ಐಆರ್‌ ದಾಖಲಿಸುವ ಮುನ್ನ ತನಿಖಾ ಸಂಸ್ಥೆ ಪ್ರಾಥಮಿಕ ವಿಚಾರಣೆ ನಡೆಸುವುದು ಕಡ್ಡಾಯ. ಈ ಕುರಿತು ಸುಪ್ರೀಂ ಕೋರ್ಟ್‌ ತೀರ್ಪು ನೀಡಿದೆ. ಆದರೆ ಈ ಪ್ರಕರಣದಲ್ಲಿ ಅರ್ಜಿದಾರರ ವಿರುದ್ಧ ಎಸಿಬಿ ನೇರವಾಗಿ ಎಫ್ಐಆರ್‌ ದಾಖಲಿಸಿ ತನಿಖೆ ಕೈಗೊಂಡಿದೆ ಎಂದು ವಾದ ಮಂಡಿಸಿದ್ದರು.

ಅಲ್ಲದೆ ಅರ್ಜಿದಾರರು ಆದಾಯ ಮೀರಿ ಅಕ್ರಮವಾಗಿ ಆಸ್ತಿ ಸಂಪಾದನೆ ಮಾಡಿ¨ªಾರೆ ಎಂದು ಆರೋಪಿಸಿ ಜಾರಿ ನಿರ್ದೇಶನಾಲಯ (ಇಡಿ) ವರದಿ ಸಲ್ಲಿಸಿತ್ತು. ಆ ವರದಿ ಆಧರಿಸಿ ಎಸಿಬಿ ಎಫ್ಐಆರ್‌ ದಾಖಲಿಸಿದೆ. ಇದು ಕಾನೂನುಬಾಹಿರ. ಆದ್ದರಿಂದ ಎಸಿಬಿ ದಾಖಲಿಸಿರುವ ಎಫ್ಐಆರ್‌ಗೆ ತಡೆ ನೀಡಬೇಕು ಎಂದು ಕೋರಿದ್ದರು.

ಇದಕ್ಕೆ ಆಕ್ಷೇಪ ವ್ಯಕ್ತ ಪಡಿಸಿದ್ದ ಲೋಕಾಯುಕ್ತ ಪರ ವಕೀಲರು, ಅಕ್ರಮವಾಗಿ ಆಸ್ತಿ ಗಳಿಕೆ ಪ್ರಕರಣದಲ್ಲಿ ಎಫ್ಐಆರ್‌ ದಾಖಲಿಸುವ ಮುನ್ನ ಪ್ರಾಥಮಿಕ ವಿಚಾರಣೆ ನಡೆಸುವ ಅಗತ್ಯ ಇಲ್ಲ. ಹಾಗಾಗಿ ಎಸಿಬಿಯು ಅರ್ಜಿದಾರರ ವಿರುದ್ಧ ಎಫ್ಐಆರ್‌ ದಾಖಲಿಸಿರುವ ಕ್ರಮ ಕಾನೂನುಬದ್ಧವಾಗಿದ್ದು, ತಡೆ ನೀಡಬಾರದು ಎಂದು ಮನವಿ ಮಾಡಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next