ಬೆಂಗಳೂರು :ಕಾಂಗ್ರೆಸ್ ನಲ್ಲಿ ಮುಖ್ಯಮಂತ್ರಿ ಆಯ್ಕೆ ಮಾಡುವುದಕ್ಕೆ ಅದರದ್ದೇ ಆದ ವಿಧಾನ ಇದೆ. ಜಮೀರ್ ಹೇಳಿಕೆ ಮುಖ್ಯವಲ್ಲ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಬಿ.ಕೆ.ಹರಿಪ್ರಸಾದ್ ಎಚ್ಚರಿಕೆ ನೀಡಿದ್ದಾರೆ.
ಸಿದ್ದರಾಮಯ್ಯ ಮತ್ತೆ ಮುಖ್ಯಮಂತ್ರಿಯಾಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ಜಮೀರ್ ಅಹಮದ್ ಖಾನ್ ಅವರು ನೀಡಿರುವ ಹೇಳಿಕೆಗೆ ತಿರುಗೇಟು ನೀಡಿ, ಜಮೀರ್ ಹೇಳಿಕೆ ಮುಖ್ಯವಲ್ಲ. ಕಾಂಗ್ರೆಸ್ ನಲ್ಲಿ ಮುಖ್ಯಮಂತ್ರಿ ಆಯ್ಕೆಗೆ ಅದರದ್ದೇ ಆದ ವಿಧಾನ ಇದೆ, ಹೈಕಮಾಂಡ್ ಇದೆ ಎಂದು ಹೇಳಿದರು.
ಇದನ್ನೂ ಓದಿ : ಬೆಳಗಾವಿಯಲ್ಲಿ ಮಸೀದಿ ಮೇಲೆ ಕೇಸರಿ ಧ್ವಜ, ಉದ್ವಿಗ್ನ ವಾತಾವರಣ; ಪ್ರಕರಣ ದಾಖಲು
ಮುಖ್ಯಮಂತ್ರಿ ವಿಚಾರಕ್ಕೆ ಸಂಬಂಧಪಟ್ಟಂತೆ ಯಾರೂ ಹೇಳಿಕೆ ನೀಡಬಾರದು ಎಂದು ಈಗಾಗಲೇ ವರಿಷ್ಠರು ಸೂಚನೆ ನೀಡಿದ್ದಾರೆ. ಈ ವಿಚಾರ ಶಿಸ್ತು ಸಮಿತಿಯ ಗಮನಕ್ಕೂ ಬರುತ್ತದೆ ಎಂದರು.