ಬೆಂಗಳೂರು: ಕಾಂಗ್ರೆಸ್ ಪಕ್ಷದ ಚಟುವಟಿಕೆಗಳಿಂದ ದೂರವೇ ಉಳಿದಿದ್ದ ಮಾಜಿ ಡಿಸಿಎಂ ಡಾ.ಜಿ.ಪರಮೇಶ್ವರ ಹಾಗೂ ಶಾಸಕ ಜಮೀರ್ ಅಹ್ಮದ್ ಖಾನ್ ಸೋಮವಾರ ಕಾಂಗ್ರೆಸ್ ಹೋರಾಟದಲ್ಲಿ ಕಾಣಿಸಿಕೊಂಡಿದ್ದಾರೆ.
ಪಕ್ಷದ ಕೆಲ ಮುಖಂಡರ ಜತೆಗಿನ ಅಸಮಾಧಾನದ ಹಿನ್ನೆಲೆಯಲ್ಲಿ ಪರಮೇಶ್ವರ್ ಪಕ್ಷದ ಹಲವು ಕಾರ್ಯಕ್ರಮಗಳಿಂದ ದೂರ ಉಳಿದಿದ್ದರು. ತಮ್ಮ ಕ್ಷೇತ್ರ ಕೊರಟಗೆರೆಗೆ ಸೀಮಿತವಾಗಿ ಉಳಿದಿದ್ದರು.
ಆದರೆ ಸೋನಿಯಾ ಹಾಗೂ ರಾಹುಲ್ ಗಾಂಧಿಯವರಿಗೆ ಇಡಿ ನೋಟಿಸ್ ಜಾರಿ ವಿರೋಧಿಸಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಪರಮೇಶ್ವರ ಭಾಗಿಯಾಗಿದ್ದಾರೆ. ಅದೇ ರೀತಿ ಐಟಿ ದಾಳಿ ಬಳಿಕ ಜಮೀರ್ ಪಕ್ಷದ ಪ್ರಮುಖ ಕಾರ್ಯಕ್ರಮಗಳಿಗೂ ಹಾಜರಾಗದೆ ಅಂತರ ಕಾಯ್ದುಕೊಂಡಿದ್ದರು. ಇಂದು ಸಿದ್ದರಾಮಯ್ಯ ಪಕ್ಕದಲ್ಲೇ ಕೆಲ ಹೊತ್ತು ಜಮೀರ್ ನಿಂತಿದ್ದರು.
ಇದನ್ನೂ ಓದಿ:ಅನುಕಂಪ ಗಿಟ್ಟಿಸಿಕೊಳ್ಳಲು ನಕಲಿ ಗಾಂಧಿ ಕುಟುಂಬದ ಹೊಸ ನಾಟಕ ಎಂದ ಬಿಜೆಪಿ
Related Articles
ಅದೇ ರೀತಿ ಕಾಂಗ್ರೆಸ್ ಹಿರಿಯ ನಾಯಕ ಆರ್.ವಿ.ದೇಶಪಾಂಡೆ ಕೂಡಾ ಬಹು ದಿನಗಳ ಬಳಿಕ ಪಕ್ಷದ ಅಧಿಕೃತ ವೇದಿಕೆಯಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ.