ಹೊಸಪೇಟೆ: ನಗರದ ಜಂಬುನಾಥ ರಸ್ತೆಯಲ್ಲಿರುವ ಎಸ್ಟಿ ಹಾಸ್ಟೆಲ್ ನಲ್ಲಿ ಆಹಾರ ಸೇವಿಸಿ ಅಸ್ವಸ್ಥಗೊಂಡು ಆಸ್ಪತ್ರೆಯಲ್ಲಿ ದಾಖಲಾದ ವಿದ್ಯಾರ್ಥಿಗಳ ಸಂಖ್ಯೆ 30 ಏರಿಕೆಯಾಗಿದೆ.
ಸಚಿವ ಭೇಟಿ:
ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹಮದ್, ಆಸ್ಪತ್ರೆಗೆ ಭೇಟಿ ನೀಡಿ, ಚಿಕಿತ್ಸೆ ಪಡೆಯುತ್ತಿರುವ ವಿದ್ಯಾರ್ಥಿನಿಯರ ಆರೋಗ್ಯ ವಿಚಾರಿಸಿದರು. ಪ್ರಕರಣ ಕುರಿತಂತೆ ಜಿಲ್ಲಾಧಿಕಾರಿ ದಿವಾಕರ್ ಬಳಿ ಘಟನೆ ಬಗ್ಗೆ ಮಾಹಿತಿ ಪಡೆದು ಕೊಂಡರು.
ಸಂಜೆ ಹಾಸ್ಟೆಲ್ ಗೆ ಭೇಟಿ ನೀಡಿ ಪರಿಶೀಲನೆ ನಡೆಸುವುದಾಗಿಯೂ ತಿಳಿಸಿದರು.