Advertisement

ರಾಜ್ಯದಲ್ಲಿ ಅಭಿವೃದ್ಧಿ ಶೂನ್ಯ ಸರಕಾರ: ಆರೋಪ

01:01 AM Mar 10, 2024 | Team Udayavani |

ಉಡುಪಿ: ಚುನಾವಣೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರದಿಂದ ಅನುದಾನ ಬಂದಿದ್ದರೂ ಬರಲಿಲ್ಲ ಎನ್ನುವ ಮೂಲಕ ಜನರನ್ನು ದಾರಿ ತಪ್ಪಿಸುತ್ತಿದ್ದಾರೆ ಎಂದು ವಿಧಾನ ಪರಿಷತ್‌ ಉಪಸಭಾಪತಿ ಎಂ.ಕೆ. ಪ್ರಾಣೇಶ್‌ ಹೇಳಿದರು.

Advertisement

ಸಂವಿಧಾನ ಜಾಥಾವನ್ನು ಮುಖ್ಯ ಮಂತ್ರಿಯವರು ಕೇಂದ್ರ ಸರಕಾ ರವನ್ನು ತೆಗಳಲು ವೇದಿಕೆ ಯಾಗಿಸಿಕೊಂಡಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ದೇಶದಲ್ಲಿ 400ಕ್ಕೂ ಅಧಿಕ ಸೀಟು ಗೆಲ್ಲಲಿದ್ದು, ಮೋದಿ ಮತ್ತೂಮ್ಮೆ ಪ್ರಧಾನಿಯಾಗುವರು ಎಂದು ಬಿಜೆಪಿ ಕಚೇರಿಯಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಹೇಳಿದರು.

ವಿಧಾನ ಪರಿಷತ್‌ ಸದಸ್ಯೆ ಭಾರತಿ ಶೆಟ್ಟಿ ಮಾತನಾಡಿ, 10 ವರ್ಷಗಳಲ್ಲಿ ಮಹಿಳಾ ಸಶಕ್ತೀಕರಣಕ್ಕೆ ಕೇಂದ್ರ ಸರಕಾರ ವಿಶೇಷ ಒತ್ತು ನೀಡಿದೆ. ರಾಜ್ಯದಲ್ಲಿ ಸಿಎಂ ಸಿದ್ದರಾಮಯ್ಯ ಕೇಂದ್ರದ ಅನುದಾನ ದಲ್ಲಿ ಜಾತ್ರೆ ಮಾಡುತ್ತಿದ್ದಾರೆ ಎಂದರು.

ಮತ್ತೋರ್ವ ಸದಸ್ಯ ಪ್ರತಾಪ್‌ ಸಿಂಹ ನಾಯಕ್‌ ಮಾತನಾಡಿ, 2004ರಿಂದ 2014ರ ಅವಧಿಯಲ್ಲಿ ಯುಪಿಎ ಸರ ಕಾರ ಕರ್ನಾಟಕಕ್ಕೆ 81 ಸಾವಿರ ಕೋ.ರೂ. ನೀಡಿದರೆ, ಎನ್‌ಡಿಎ ಸರಕಾರ 2014 ರಿಂದ ಈವರೆಗೆ 2.82 ಲಕ್ಷ ಕೋ.ರೂ. ನೀಡಿದೆ. ಅಂದರೆ ಶೇ.246ರಷ್ಟು ಹೆಚ್ಚು ಅನುದಾನ ನೀಡಿದೆ. ಆದರೆ ರಾಜ್ಯ ಕಾಂಗ್ರೆಸ್‌ ಸರಕಾರ ಎಲ್ಲ ಅನು ದಾನವನ್ನು ಗ್ಯಾರಂಟಿಗಳಿಗೆ ಬಳಸಿ ಅಭಿವೃದ್ಧಿ ಶೂನ್ಯವಾಗಿಸಿದೆ ಎಂದು ಆರೋಪಿಸಿದರು.

ಜಿಲ್ಲಾ ಬಿಜೆಪಿ ಅಧ್ಯಕ್ಷ ಕಿಶೋರ್‌ಕುಮಾರ್‌ ಕುಂದಾಪುರ, ಪ್ರಧಾನ ಕಾರ್ಯ ದರ್ಶಿಗಳಾದ ರಾಘವೇಂದ್ರ ಕಿಣಿ, ರೇಶ್ಮಾ ಉದಯ ಕುಮಾರ್‌ ಶೆಟ್ಟಿ, ವಕ್ತಾರ ವಿಜಯಕುಮಾರ್‌ ಉದ್ಯಾವರ ಉಪಸ್ಥಿತರಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next