Advertisement

ದಲಿತರಿಗೆ ಶೂನ್ಯ ಬಡ್ಡಿ  ಸಾಲ: ನಾರಾಯಣ ಸ್ವಾಮಿ

12:32 AM Aug 17, 2021 | Team Udayavani |

ಬೆಂಗಳೂರು: ದೇಶದಲ್ಲಿ ದಲಿತರಿಗೆ ಶೂನ್ಯ ಬಡ್ಡಿ ದರದಲ್ಲಿ ಸಾಲ ಕೊಡುವ ವ್ಯವಸ್ಥೆಯನ್ನು ಜಾರಿಗೊಳಿಸಲಾಗುವುದು ಎಂದು ಕೇಂದ್ರ ಸಮಾಜ ಕಲ್ಯಾಣ ಮತ್ತು ಸಬಲೀಕರಣ ಖಾತೆ ರಾಜ್ಯ ಸಚಿವರಾದ  ಎ. ನಾರಾಯಣ ಸ್ವಾಮಿ ತಿಳಿಸಿದರು .

Advertisement

ಜನಾಶೀರ್ವಾದ ಯಾತ್ರೆ ಹಿನ್ನೆಲೆಯಲ್ಲಿ ನಗರದ ಅರಮನೆ ಮೈದಾನದಲ್ಲಿ  ಪಕ್ಷದ ಕಾರ್ಯಕರ್ತರ ಸಮಾವೇಶ ನಡೆಸಿದ ಬಳಿಕ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ  ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಸಿದ್ಧ ವಿಶ್ವವಿದ್ಯಾನಿಲಯಗಳಲ್ಲಿ ಪ್ರತಿ ರಾಜ್ಯದಿಂದ 100 ಜನರನ್ನು ಐಎಎಸ್‌ ಮಾಡಿಸುವ ಸಂಕಲ್ಪವನ್ನು ಬಿಜೆಪಿ ಮಾಡಿದೆ.  ದಲಿತರಲ್ಲಿ ಶೈಕ್ಷಣಿಕ ಕ್ರಾಂತಿ ಆಗಬೇಕು. ಇದಕ್ಕಾಗಿ ರೆಸಿಡೆನ್ಶಿಯಲ್‌ ಸ್ಕೂಲ್‌ ಆರಂಭಿಸಲು ಘಟಕ ವೆಚ್ಚವನ್ನು ಹೆಚ್ಚಿಸಲಾಗಿದೆ ಎಂದು ತಿಳಿಸಿದರು.

84 ಲೋಕಸಭಾ ಕ್ಷೇತ್ರಗಳಲ್ಲಿ ಡಾ| ಅಂಬೇಡ್ಕರ್‌ ನವೋದಯ ವಸತಿ ಕಾಲೇಜುಗಳನ್ನು ಆರಂಭಿಸಲು ಸೂಚಿಸಿದ್ದೇನೆ. ವೃದ್ಧಾಶ್ರಮ ಮತ್ತು ಇತರ ಹೆಸರಿನಲ್ಲಿ ಅನುದಾನದ ದುರ್ಬಳಕೆ ತಪ್ಪಿಸಲು ಸೂಚಿಸಿದ್ದೇನೆ  ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next