Advertisement
156 ಮಾನಸಿಕ ಅಸ್ವಸ್ಥರಿಂದ ಮತಇದೇ ಮೊದಲ ಬಾರಿಗೆ ತಮಿಳುನಾಡಿನಲ್ಲಿ 156 ಮಾನಸಿಕ ಅಸ್ವಸ್ಥರು ತಮ್ಮ ಹಕ್ಕು ಚಲಾಯಿಸಿದ್ದಾರೆ. ಚೆನ್ನೈನ ಕಿಲ್ಪಾಕ್‌ನಲ್ಲಿರುವ ಇನ್‌ಸ್ಟಿಟ್ಯೂಟ್ ಆಫ್ ಮೆಂಟಲ್ ಹಾಸ್ಪಿಟಲ್‌ನಲ್ಲಿ ಇವರಿಗೆಂದೇ ವಿಶೇಷ ಮತಗಟ್ಟೆಗಳನ್ನು ಸ್ಥಾಪಿಸಲಾಗಿತ್ತು. ಇಲ್ಲಿ ಸಾಲುಗಟ್ಟಿ ನಿಂತ ರೋಗಿಗಳು ಇದೇ ಮೊದಲ ಬಾರಿಗೆ ಮತದಾನ ಮಾಡಿದ್ದಾರೆ. ಈ ಪೈಕಿ 56 ಮಂದಿ ಮಹಿಳೆಯರೂ ಸೇರಿದ್ದಾರೆ. ಈ ಪ್ರದೇಶವು ಸೆಂಟ್ರಲ್ ಚೆನ್ನೈ ಕ್ಷೇತ್ರದ ವ್ಯಾಪ್ತಿಗೆ ಬರುತ್ತದೆ. ಇಲ್ಲಿ ಕೇಂದ್ರದ ಮಾಜಿ ಸಚಿವ, ಡಿಎಂಕೆ ನಾಯಕ ದಯಾನಿಧಿ ಮಾರನ್ ಹಾಗೂ ಎಐಎಡಿಎಂಕೆ-ಬಿಜೆಪಿ-ಪಿಎಂಕೆ ಮೈತ್ರಿಕೂಟದ ಅಭ್ಯರ್ಥಿ ಸ್ಯಾಮ್ ಪೌಲ್ ನಡುವೆ ಪೈಪೋಟಿ ಏರ್ಪಟ್ಟಿದೆ.
ಇದೇ ಮೊದಲ ಬಾರಿಗೆ ತಮಿಳುನಾಡಿನಲ್ಲಿ 156 ಮಾನಸಿಕ ಅಸ್ವಸ್ಥರು ತಮ್ಮ ಹಕ್ಕು ಚಲಾಯಿಸಿದ್ದಾರೆ. ಚೆನ್ನೈನ ಕಿಲ್ಪಾಕ್‌ನಲ್ಲಿರುವ ಇನ್‌ಸ್ಟಿಟ್ಯೂಟ್ ಆಫ್ ಮೆಂಟಲ್ ಹಾಸ್ಪಿಟಲ್‌ನಲ್ಲಿ ಇವರಿಗೆಂದೇ ವಿಶೇಷ ಮತಗಟ್ಟೆಗಳನ್ನು ಸ್ಥಾಪಿಸಲಾಗಿತ್ತು. ಇಲ್ಲಿ ಸಾಲುಗಟ್ಟಿ ನಿಂತ ರೋಗಿಗಳು ಇದೇ ಮೊದಲ ಬಾರಿಗೆ ಮತದಾನ ಮಾಡಿದ್ದಾರೆ. ಈ ಪೈಕಿ 56 ಮಂದಿ ಮಹಿಳೆಯರೂ ಸೇರಿದ್ದಾರೆ. ಈ ಪ್ರದೇಶವು ಸೆಂಟ್ರಲ್ ಚೆನ್ನೈ ಕ್ಷೇತ್ರದ ವ್ಯಾಪ್ತಿಗೆ ಬರುತ್ತದೆ. ಇಲ್ಲಿ ಕೇಂದ್ರದ ಮಾಜಿ ಸಚಿವ, ಡಿಎಂಕೆ ನಾಯಕ ದಯಾನಿಧಿ ಮಾರನ್ ಹಾಗೂ ಎಐಎಡಿಎಂಕೆ-ಬಿಜೆಪಿ-ಪಿಎಂಕೆ ಮೈತ್ರಿಕೂಟದ ಅಭ್ಯರ್ಥಿ ಸ್ಯಾಮ್ ಪೌಲ್ ನಡುವೆ ಪೈಪೋಟಿ ಏರ್ಪಟ್ಟಿದೆ.