Advertisement

ಶಶಿಕಲಾ ಜೊಲ್ಲೆ ಅವರಿಗೆ ಜಿರೋ ಟ್ರಾಫಿಕ್‌:ಅರ್ಜಿ ವಜಾ.

10:18 PM Dec 07, 2021 | Team Udayavani |

ಬೆಂಗಳೂರು: ಸಚಿವರ ಪ್ರಮಾಣ ಸ್ವೀಕಾರ ಸಮಾರಂಭದಲ್ಲಿ ಪಾಲ್ಗೊಳ್ಳಲು ಶಾಸಕಿ ಶಶಿಕಲಾ ಜೊಲ್ಲೆ ಅವರಿಗೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ರಾಜಭವನದವರೆಗೆ “ಜೀರೋ ಟ್ರಾಫಿಕ್‌’ ವ್ಯವಸ್ಥೆ ಕಲ್ಪಿಸಿದ ಕ್ರಮ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್‌ ವಜಾಗೊಳಿಸಿದೆ.

Advertisement

ಈ ಕುರಿತು ವಕೀಲ ಜಿ. ಬಾಲಾಜಿ ನಾಯ್ಡು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ರಿತುರಾಜ್‌ ಅವಸ್ಥಿ ನೇತೃತ್ವದ ವಿಭಾಗೀಯ ನ್ಯಾಯಪೀಠ, ಅರ್ಜಿ ವಜಾಗೊಳಿಸಿ ಆದೇಶಿಸಿತು.
ವಿಚಾರಣೆ ವೇಳೆ ಸರ್ಕಾರಿ ವಕೀಲರು,ಅರ್ಜಿದಾರರು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸುವ ಮುನ್ನ ಸಂಬಂಧಪಟ್ಟ ಪ್ರಾಧಿಕಾರಕ್ಕೆ ಮನವಿ ಸಲ್ಲಿಸಿರಲಿಲ್ಲ.

ಹಾಗಾಗಿ, ಈ ಅರ್ಜಿಯನ್ನೇ ಮನವಿಯಾಗಿ ಪರಿಗಣಿಸಿ ಒಂದು ತಿಂಗಳಲ್ಲಿ ಸೂಕ್ತ ತೀರ್ಮಾನ ಕೈಗೊಂಡು ನ್ಯಾಯಾಲಯಕ್ಕೆ ಮಾಹಿತಿ ನೀಡುವಂತೆ ಹೈಕೋರ್ಟ್‌ 2021ರ ಆ.18ರಂದು ಸರ್ಕಾರಕ್ಕೆ ನಿರ್ದೇಶಿಸಿತ್ತು. ಅದರಂತೆ ಸರ್ಕಾರವು ಮನವಿ ಪರಿಗಣಿಸಿತ್ತು.

ಇದನ್ನೂ ಓದಿ:ಛಾಯಾಗ್ರಾಹಕ ಸೆರೆಹಿಡಿದ ಸೂರ್ಯನ ಚಿತ್ರಕ್ಕೆ ಬರೀ 3, 771 ರೂ.!

ಈ ವಿಚಾರದಲ್ಲಿ ಯಾವುದೇ ನಿಯಮ ಉಲ್ಲಂಘನೆಯಾಗಿದ ಹಾಗೂ ಆಡಳಿತಾತ್ಮಕ ಅಧಿಕಾರ ದುರ್ಬಳಕೆ ಆಗಿರುವುದನ್ನು ಸಾಬೀತುಪಡಿಸುವ ಸಾಕ್‌ಷ್ಯಾಧಾರಗಳನ್ನು ಅರ್ಜಿದಾರರು ಒದಗಿಸಿಲ್ಲ.ಆದ್ದರಿಂದ ಸರ್ಕಾರವವು ಮನವಿ ತಿರಸ್ಕರಿಸಿದೆ ಎಂದು ನ್ಯಾಯಪೀಠಕ್ಕೆ ವಿವರಿಸಿದರು.ಈ ಹೇಳಿಕೆ ದಾಖಲಿಸಿಕೊಂಡ ನ್ಯಾಯಪೀಠ ಅರ್ಜಿ ವಜಾಗೊಳಿಸಿ ಆದೇಶಿಸಿತು.

Advertisement
Advertisement

Udayavani is now on Telegram. Click here to join our channel and stay updated with the latest news.

Next