Advertisement
ಚಿಕಬಳಾಪುರ ಜಿಲ್ಲೆಯ ಶಿಡ್ಡಘಟ್ಟ ತಾಲೂಕಿನ ತಲಕಾಯಲ ಬೆಟ್ಟದ ವ್ಯಾಪ್ತಿಯಲ್ಲಿ ಝೀಕಾ ವೈರಸ್ ಕಾಣಿಸಿಕೊಂಡಿರುವುದರಿಂದ ಆರೋಗ್ಯ ಮತ್ತು ಕುಟುಂಬ ಇಲಾಖೆ ಮುಂಜಾಗ್ರತ ಕ್ರಮ ಚುರುಕಾಗಿ ಕೈಗೊಳ್ಳುತ್ತಿದೆ. ಇಂತಹ ಪ್ರಕರಣ ಬಾರದಂತೆ ಹೆಚ್ಚು ಕ್ರಮ ಕೈಗೊಳ್ಳುತ್ತಿದೆ. ಇದಕ್ಕೆ ಜನರಲ್ಲಿ ಅರಿವು ಮೂಡಿಸುವ ಕಾರ್ಯ ಮುಂದಾಗಿದೆ.
Related Articles
Advertisement
ಸೋಂಕು ಕಾಣಿಸಿಕೊಂಡವರಿಗೆ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆ ನೀಡಲಾಗುವುದು. ಝೀಕಾ ವೈರಸ್ ಸೋಂಕಿನ ನಿರ್ದಿಷ್ಟ ಚಿಕಿತ್ಸೆ ಹಾಗೂ ಲಸಿಕೆ ಲಭ್ಯವಿಲ್ಲ. ರೋಗದ ಲಕ್ಷಣಗಳಿಗೆ ಅನುಗುಣವಾಗಿ ಚಿಕಿತ್ಸೆ ನೀಡಲಾಗುವುದು. ಮನೆಯಲ್ಲಿಯೇ ಚಿಕಿತ್ಸೆ ಪಡೆಯಬಹುದು. ಸಾಕಷ್ಟು ವಿಶ್ರಾಂತಿ ಪಡೆಯಬಹುದು. ನಿರ್ಜಲೀಕರಣ ತಪ್ಪಿಸಲು ಹೆಚ್ಚು ನೀರಿನ ಅಂಶವುಳ್ಳ ಆಹಾರ ಪದಾರ್ಥ ಬಳಸುವುದು. ಸೋಂಕಿತರು ಬೇರೆಯವರಿಗೆ ರೋಗ ಹರಡದಂತೆ ತಡೆಯಲು ಸೊಳ್ಳೆ ಪರದೆ ಬಳಸಬೇಕು. ಸೊಳ್ಳೆ ಉತ್ಪತ್ತಿತಾಣಗಳನ್ನು ನಾಶಪಡಿಸುವುದು. ಮನೆ ಒಳಾಂಗಣ ಮತ್ತು ಹೊರಾಂಗಣ ಸ್ವತ್ಛವಾಗಿ ಇಡುವುದು ಹೀಗೆ ಅನೇಕ ಮುನ್ನೆಚ್ಚರಿಕೆ ಕ್ರಮ ಕೈಗೊಂಡರೆ ವೈರಸ್ ಅನ್ನು ಬರೆದಂತೆ ನೋಡಿಕೊಳ್ಳಬಹುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳು ಅರಿವು ಮೂಡಿಸುತ್ತಿದ್ದಾರೆ.
ಝೀಕಾ ಸೋಂಕಿನ ಲಕ್ಷಣಗಳು ಏನೇನು?: ಕಣ್ಣು ಕೆಂಪಾಗುವಿಕೆ, ತಲೆನೋವು, ಜ್ವರ, ಕೀಲುಗಳಲ್ಲಿ ನೋವು, ಗಂಧೆಯೇಳುವುದು. ಸ್ನಾಯುಗಳಲ್ಲಿ ನೋವು ಕಾಣಿಸಿಕೊಳ್ಳುವುದು. ಇಂತಹ ಲಕ್ಷಣ ಕಾಣಿಸಿಕೊಂಡವರು ತಕ್ಷಣ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ತೆರಳಿ ಚಿಕಿತ್ಸೆ ಪಡೆಯಬೇಕು. ಗರ್ಭಾವಸ್ಥೆಯಲ್ಲಿ ಝೀಕಾ ಸೋಂಕು ಕಾಣಿಸಿಕೊಂಡಲ್ಲಿ ಜನಿಸಿದ ಶಿಶುವಿನ ತಲೆ ಗಾತ್ರದಲ್ಲಿ ಕಡಿಮೆ (ಮೈಕೊ›à ಸೆಫಾಲಿ) ಬೆಳವಣಿಗೆಗೆ ದೋಷ ಕಂಡು ಬರಬಹುದು. ದೇವನಹಳ್ಳಿ ತಾಲೂಕಿನ ವಿಜಯಪುರದಿಂದ ಶಿಡ್ಡಘಟ್ಟಕ್ಕೆ 14 ಕಿ.ಮೀ. ಹಾಗೂ ತಲಕಾಯಲ ಬೆಟ್ಟಕ್ಕೆ 22 ಒಟ್ಟು 36ಕಿ.ಮೀ. ಆಗುತ್ತದೆ. ಅದಕ್ಕಾಗಿ ಹೆಚ್ಚಿನ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗುತ್ತಿದೆ.
ಬೆಂ.ಗ್ರಾಮಾಂತರ ಜಿಲ್ಲೆಯಲ್ಲಿ ಝೀಕಾ ವೈರಸ್ ಪತ್ತೆಯಾಗಿಲ್ಲ. ಯಾರಿಗಾದರೂ ಝೀಕಾ ವೈರಸ್ ಲಕ್ಷಣ ಕಂಡುಬಂದರೆ ಪ್ರಾಥಮಿಕ ಆರೋಗ್ಯ ಕೇಂದ್ರ, ಸಾರ್ವಜನಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಸೂಕ್ತ ಚಿಕಿತ್ಸೆ ಪಡೆಯಬೇಕು. ಯಾರೂ ಭಯಪಡುವಂತಿಲ್ಲ. – ಸುನೀಲ್ ಕುಮಾರ್, ಜಿಲ್ಲಾ ಆರೋಗ್ಯಾಧಿಕಾರಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
-ಎಸ್.ಮಹೇಶ್