Advertisement
ಝೀಕಾ ಸೋಂಕು ನೀರಿನಲ್ಲಿ ಉತ್ಪತ್ತಿಯಾಗುವ ಈಡಿಸ್ ಜಾತಿಯ ಸೊಳ್ಳೆಗಳ ಕಡಿತದಿಂದ ಹರಡುತ್ತದೆ. ಜ್ವರ, ತಲೆನೋವು, ಕಣ್ಣು ಕೆಂಪಾಗುವಿಕೆ, ಗಂಧೆಗಳು (ದದ್ದು), ಕೀಲು, ಸ್ನಾಯುಗಳಲ್ಲಿ ನೋವು ಸೇರಿದಂತೆ ಇತರೆ ಲಕ್ಷಣಗಳ ಕಾಣಿಸಿಕೊಳ್ಳಲಿದೆ. ಸೋಂಕಿತರಲ್ಲಿ ಸೋಂಕಿನ ಲಕ್ಷಣಗಳು ಕಂಡು ಬರುವುದಿಲ್ಲ. ಉಳಿದಂತೆ ರೋಗಲಕ್ಷಣಗಳ ಸೌಮ್ಯ ಹಾಗೂ ಸಾಧಾರಣ ಸ್ವರೂಪವಾಗಿದೆ. ಗರ್ಭಾವಸ್ಥೆಯಲ್ಲಿ ಝೀಕಾ ಸೋಂಕು ಕಾಣಿಸಿಕೊಂಡರೆ, ಜನಸಿದ ಶಿಶುವಿನಲ್ಲಿ ತಲೆ ಗಾತ್ರದಲ್ಲಿ ಕಡಿಮೆ (ಮೈಕ್ರೊಸೆಫಾಲಿ) ಬೆಳವಣಿಗೆ ದೋಷ ಕಂಡು ಬರಲಿದೆ.
ಸೊಳ್ಳೆ ಉತ್ಪತ್ತಿ ತಾಣ ನಾಶಪಡಿಸಬೇಕು. ಮನೆ ಒಳಾಂಗಣ ಹಾಗೂ ಹೊರಾಂಗಣ ಸcತ್ಛತೆ ಕಾಪಾಡುವುದು, ನೀರು ಸಂಗ್ರಹಣ ಪರಿಕರಗಳನ್ನು ವಾರಕ್ಕೊಮ್ಮೆ ಸ್ವತ್ಛಗೊಳಿಸುವುದು ಹಾಗೂ ಮುಚ್ಚಳದಿಂದ ಮುಚ್ಚುವುದು. ನೀರು ನಿಲ್ಲದಂತೆ ಎಚ್ಚರಿಕೆ ವಹಿಸಲು ತಿಳಿಸಿ¨