Advertisement
ರಾಜ್ಯದಲ್ಲಿ ಜಿಲ್ಲಾ ಪಂಚಾಯಿತಿ ಹಾಗೂ ತಾಲೂಕು ಪಂಚಾಯಿತಿ ಕ್ಷೇತ್ರಗಳ ಗಡಿ ನಿರ್ಣಯ ಮತ್ತು ಮೀಸಲಾತಿ ನಿಗದಿಪಡಿಸುವ ಅಧಿಕಾರವನ್ನು ರಾಜ್ಯ ಚುನಾವಣಾ ಆಯೋಗದಿಂದ ವಾಪಸ್ ಪಡೆದು, ಕರ್ನಾಟಕ ಪಂಚಾಯತ್ ರಾಜ್ ಸೀಮಾ ನಿರ್ಣಯ ಆಯೋಗ ರಚಿಸಲು “ಕರ್ನಾಟಕ ಪಂಚಾಯತ್ ರಾಜ್ ಮತ್ತು ಗ್ರಾಮ ಸ್ವರಾಜ್ ಕಾಯ್ದೆ’ಗೆ ತಿದ್ದುಪಡಿ ತಂದಿರುವುದನ್ನು ಪ್ರಶ್ನಿಸಿ ರಾಜ್ಯ ಚುನಾವಣಾ ಆಯೋಗ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯು ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ಹಾಗೂ ನ್ಯಾ. ಸೂರಜ್ ಗೋವಿಂದರಾಜ್ ಅವರಿದ್ದ ವಿಭಾಗೀಯ ನ್ಯಾಯಪೀಠದ ಮುಂದೆ ಮಂಗಳವಾರ ವಿಚಾರಣೆಗೆ ಬಂದಿತ್ತು.
Related Articles
Advertisement
ಸರ್ಕಾರದ ಪರ ವಕೀಲರು ವಾದ ಮುಂದುವರಿಸಿ, ಅರ್ಜಿಯಲ್ಲಿ ತಿದ್ದುಪಡಿ ಕಾಯ್ದೆಯ ಸಿಂಧುತ್ವವನ್ನು ಪ್ರಶ್ನೆ ಮಾಡಿರುವುದರಿಂದ ಆಕ್ಷೇಪಣೆ ಸಲ್ಲಿಸಲು ನಾಲ್ಕು ವಾರ ಕಾಲಾವಕಾಶಬೇಕು ಕೋರಿದರು. ಇದನ್ನು ಮಾನ್ಯ ಮಾಡಿದ ನ್ಯಾಯಪೀಠ ವಿಚಾರಣೆಯನ್ನು ಫೆ.14ಕ್ಕೆ ಮುಂದೂಡಿತು.