Advertisement

ಜಿಪಂ-ತಾಪಂ ಚುನಾವಣೆ: ಫೆ.14ಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್‌

09:37 PM Feb 08, 2023 | Team Udayavani |

ಬೆಂಗಳೂರು: ಜಿ.ಪಂ. ಹಾಗೂ ತಾ.ಪಂ. ಕ್ಷೇತ್ರಗಳ ಗಡಿ ನಿರ್ಣಯ ಮತ್ತು ಮೀಸಲಾತಿ ನಿಗದಿಪಡಿಸುವ ಅಧಿಕಾರವನ್ನು ರಾಜ್ಯ ಚುನಾವಣ ಆಯೋಗದಿಂದ ಹಿಂಪಡೆದು, ಕರ್ನಾಟಕ ಪಂಚಾಯತ್‌ ರಾಜ್‌ ಸೀಮಾ ನಿರ್ಣಯ ಆಯೋಗ ರಚಿಸಿರುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್‌ ಫೆ.14ಕ್ಕೆ ಮುಂದೂಡಿದೆ.

Advertisement

ಈ ಕುರಿತು ರಾಜ್ಯ ಚುನಾವಣ ಆಯೋಗ ಸಲ್ಲಿಸಿರುವ ಅರ್ಜಿಯು ಹಿರಿಯ ನ್ಯಾ| ಆಲೋಕ್‌ ಆರಾಧೆ ಮತ್ತು ನ್ಯಾ| ಎಸ್‌.ವಿಶ್ವಜಿತ್‌ ಶೆಟ್ಟಿ ಅವರಿದ್ದ ವಿಭಾಗೀಯ ನ್ಯಾಯಪೀಠದ ಮುಂದೆ ಬುಧವಾರ ವಿಚಾರಣೆಗೆ ನಿಗದಿಯಾಗಿತ್ತು.

ಸರಕಾರದ ಪರ ಹಾಜರಾದ ವಕೀಲರು, ರಾಜ್ಯ ಸರಕಾರದ ಪರ ಅಡ್ವೊಕೇಟ್‌ ಜನರಲ್‌ ವಾದ ಮಂಡಿಸಬೇಕಿದ್ದು, ಅವರು ಈ ದಿನ ಲಭ್ಯರಿಲ್ಲದ ಕಾರಣ ಕಾಲಾವಕಾಶ ನೀಡಬೇಕು ಎಂದು ಕೋರಿದರು. ಇದನ್ನು ಪರಿಗಣಿಸಿದ ನ್ಯಾಯಪೀಠ ಅರ್ಜಿಯ ವಿಚಾರಣೆಯನ್ನು ಫೆ.14ಕ್ಕೆ ಮುಂದೂಡಿತು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next