Advertisement

ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್: ಸರ್ಕಾರದಿಂದ ಸುಗ್ರೀವಾಜ್ಞೆ

10:28 PM Aug 23, 2022 | Team Udayavani |

ಬೆಂಗಳೂರು: ರಾಜ್ಯದ ಜಿಲ್ಲಾ ಪಂಚಾಯತಿ ಹಾಗೂ ತಾಲೂಕು ಪಂಚಾಯಿತಿ ಕ್ಷೇತ್ರಗಳಗೆ ಜನಸಂಖ್ಯೆ ಮತ್ತು ಸ್ಥಾನಗಳ ನಿಗದಿಯಲ್ಲಿ ಬದಲಾವಣೆ ಮಾಡಿ “ಕರ್ನಾಟಕ ಗ್ರಾಮ ಸ್ವರಾಜ್‌ ಮತ್ತು ಪಂಚಾಯತ್‌ರಾಜ್‌ (ತಿದ್ದುಪಡಿ) ಅಧ್ಯಾದೇಶ-2022′ ಅನ್ನು ರಾಜ್ಯ ಸರ್ಕಾರ ಹೊರಡಿಸಿದೆ.

Advertisement

ಈ ಸಂಬಂಧ ಕರ್ನಾಟಕ ಗ್ರಾಮ ಸ್ವರಾಜ್‌ ಮತ್ತು ಪಂಚಾಯತ್‌ರಾಜ್‌ ವಿಧೇಯಕ-2022ರ ಸೆಕ್ಷನ್‌ 121 ಹಾಗೂ ಸೆಕ್ಷನ್‌ 160ಗೆ ತಿದ್ದುಪಡಿ ತಂದು ಹೊರಡಿಸಲಾಗಿದ್ದ ಸುಗ್ರೀವಾಜ್ಞೆಗೆ ಆಗಸ್ಟ್‌ 20ರಂದು ರಾಜ್ಯಪಾಲರು ಒಪ್ಪಿಗೆ ನೀಡಿದ್ದು, ಸುಗ್ರೀವಾಜ್ಞೆಯನ್ನು ರಾಜ್ಯ ಸರ್ಕಾರ ಆಗಸ್ಟ್‌ 22ರ ರಾಜ್ಯಪತ್ರದಲ್ಲಿ ಪ್ರಕಟಿಸಿದೆ. ತಕ್ಷಣದಿಂದಲೇ ಈ ಅಧ್ಯಾದೇಶ ಜಾರಿಗೆ ಬರಲಿದೆ ಎಂದು ರಾಜ್ಯಪತ್ರದಲ್ಲಿ ಹೇಳಲಾಗಿದೆ.

ಸೆಕ್ಷನ್‌ 121ರ ತಿದ್ದುಪಡಿಯಂತೆ ತಾ.ಪಂ. 12 ಕ್ಷೇತ್ರಗಳಿಗೆ 2 ಲಕ್ಷ ಗ್ರಾಮೀಣ ಜನಸಂಖ್ಯೆ ಬದಲಿಗೆ 2.30 ಲಕ್ಷ ಜನಸಂಖ್ಯೆ ಮಾಡಲಾಗಿದೆ. ಪ್ರತಿ ಜಿಲ್ಲೆಯಲ್ಲಿ 7 ಲಕ್ಷ ಜನಸಂಖ್ಯೆಗೆ ಕನಿಷ್ಠ 20 ಜಿ.ಪಂ. ಕ್ಷೇತ್ರಗಳ ಬದಲಿಗೆ 25 ಕ್ಷೇತ್ರಗಳನ್ನು ಮಾಡಲಾಗಿದೆ. ಅದೇ ರೀತಿ 7ರಿಂದ 9.5 ಲಕ್ಷ ಜನಸಂಖ್ಯೆಗೆ 28 ಸದಸ್ಯರು ಇರಬೇಕು.

Advertisement

Udayavani is now on Telegram. Click here to join our channel and stay updated with the latest news.

Next