Advertisement
ತಾ.ಪಂ ಹಾಗೂ ಜಿ.ಪಂ ಕ್ಷೇತ್ರಗಳ ಜನಸಂಖ್ಯೆ ಬಗ್ಗೆ “ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್‌ರಾಜ್ (ತಿದ್ದುಪಡಿ) ವಿಧೇಯಕ-2022ನ್ನು ಕಳೆದ ಮಾರ್ಚ್‌ನಲ್ಲಿ ನಡೆದ ಬಜೆಟ್ ಅಧಿವೇಶನದಲ್ಲಿ ಅಂಗೀಕರಿಸಲಾಗಿತ್ತು. ಇದೀಗ ಈ ತಿದ್ದುಪಡಿ ಕಾಯ್ದೆಯ ಸೆಕ್ಷನ್ 121 ಮತ್ತು ಸೆಕ್ಷನ್ 160ರ ತಿದ್ದುಪಡಿಗೆ ಸುಗ್ರೀವಾಜ್ಞೆತರಲು ಇತ್ತೀಚೆಗೆ ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದ್ದು, ಒಂದೆರಡು ದಿನಗಳಲ್ಲಿ ಅದನ್ನು ರಾಜ್ಯಪಾಲರಿಗೆ ಕಳಿಸಿಕೊಡಲಿದೆ ಎಂದು ಸರ್ಕಾರದ ಮೂಲಗಳು ಖಚಿತಪಡಿಸಿವೆ.
Related Articles
Advertisement
ಏನಿದು ಸುಗ್ರೀವಾಜ್ಞೆ? :
ತಾ.ಪಂ ಹಾಗೂ ಜಿ.ಪಂ ಕ್ಷೇತ್ರಗಳ ಜನಸಂಖ್ಯೆ ಬಗ್ಗೆ “ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್‌ರಾಜ್ (ತಿದ್ದುಪಡಿ) ವಿಧೇಯಕ-2022 ತರಲಾಗಿತ್ತು. ಅದರಂತೆ, ಸೆಕ್ಷನ್ 121 ಪ್ರಕಾರ 2 ಲಕ್ಷ ಗ್ರಾಮೀಣ ಜನಸಂಖ್ಯೆ ಹೊಂದಿರುವ ತಾಲೂಕುಗಳಲ್ಲಿ ಪ್ರತಿ 12 ಸಾವಿರಕ್ಕೆ ಕಡಿಮೆಯಿಲ್ಲದ ಜನಸಂಖ್ಯೆಗೆ ಒಬ್ಬ ತಾ.ಪಂ. ಸದಸ್ಯ ಇರಬೇಕು. ಅದೇ ರೀತಿ 1 ಲಕ್ಷ ಮೀರಿದ ಹಾಗೂ 2 ಲಕ್ಷ ಮೀರದ ಗ್ರಾಮೀಣ ಜನಸಂಖ್ಯೆ ಹೊಂದಿರುವ ತಾಲೂಕುಗಳಲ್ಲಿ ಪ್ರತಿ 10 ಸಾವಿರ ಜನಸಂಖ್ಯೆಗೆ ಒಬ್ಬ ತಾ.ಪಂ. ಸದಸ್ಯರಂತೆ ಕನಿಷ್ಠ 11 ಚುನಾಯಿತ ಸದಸ್ಯರು ಇರಬೇಕು. 50ರಿಂದ 1 ಲಕ್ಷ ಜನಸಂಖ್ಯೆಗೆ ಒಂಭತ್ತು ಸದಸ್ಯರು. 50 ಸಾವಿರಕ್ಕಿಂತ ಕಡಿಮೆ ಜನಸಂಖ್ಯೆಗೆ ಏಳು ಮಂದಿ ಸದಸ್ಯರು ಇರಬೇಕು. ಅದೇ ರೀತಿ ಸೆಕ್ಷನ್ 160 ಪ್ರಕಾರ ಒಂದು ಜಿಲ್ಲೆಯಲ್ಲಿ 35ರಿಂದ 45 ಸಾವಿರ ಜನಸಂಖ್ಯೆಗೆ ಒಬ್ಬರಂತೆ ಒಂದು ಜಿಲ್ಲೆಯಲ್ಲಿ 20 ಜಿ.ಪಂ. ಸದಸ್ಯರು ಇರಬೇಕು.
ಯಾಕೆ ಸುಗ್ರೀವಾಜ್ಞೆ? :
2022ರ ಮಾರ್ಚ್‌ನಲ್ಲಿ ತರಲಾದ ತಿದ್ದುಪಡಿಯಲ್ಲಿ 2 ಲಕ್ಷ ಮೇಲ್ಪಟ್ಟ ಜನಸಂಖ್ಯೆಗೆ 12 ತಾ.ಪ. ಸ್ಥಾನಗಳು ಎಂದು ಇತ್ತು. ಆದರೆ, 2 ಲಕ್ಷದ ಮೇಲೆ ಸ್ವಲ್ಪ ಪ್ರಮಾಣದ ಜನಸಂಖ್ಯೆ ಹೆಚ್ಚಿರುವ ಕಡೆ ಸ್ಥಾನಗಳ ನಿಗದಿಗೆ ಸಮಸ್ಯೆ ಆಗುತ್ತಿತ್ತು. ಅದೇ ರೀತಿ ಹಿಂದಿನ ತಿದ್ದುಪಡಿಯಲ್ಲಿ ಒಂದು ಜಿಲ್ಲೆಯಲ್ಲಿ ತಾಲೂಕುಗಳಿಂದ ಆಯ್ಕೆಯಾಗುವ ಸದಸ್ಯರ ಸಂಖ್ಯೆ ಪ್ರತಿ ಜಿಲ್ಲೆಯಲ್ಲಿ 20 ಇರಬೇಕು ಎಂದಿತ್ತು. ಇಲ್ಲಿಯೂ ಸಹ ಕಡಿಮೆ ಜನಸಂಖ್ಯೆ ಇರುವ ಜಿಲ್ಲೆಗಳಲ್ಲಿ ಸ್ಥಾನ ನಿಗದಿ ಸಮಸ್ಯೆ ಆಗುತಿತ್ತು. ಅದಕ್ಕಾಗಿ, ಸುಗ್ರೀವಾಜ್ಞೆಯಲ್ಲಿ ಜಿಲ್ಲೆಗಳಿಗೆ ಜನಸಂಖ್ಯೆ ನಿಗದಿಪಡಿಸಲು ಈ ಸುಗ್ರೀವಾಜ್ಞೆ ತರಲಾಗಿದೆ. ಉಳಿದಂತೆ, ಹಿಂದಿನ ತಿದ್ದುಪಡಿ ಕಾಯ್ದೆಯಲ್ಲಿರುವಂತೆಯೇ ಮುಂದುವರಿಯಲಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಇಲಾಖೆಯ ಹಿರಿಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
-ರಫೀಕ್ ಅಹ್ಮದ್