Advertisement

ಎಸ್‌ಸಿಪಿ, ಟಿಎಸ್‌ಪಿ ಅನುದಾನ: ಗರಿಷ್ಠ ಪ್ರಗತಿ ಸಾಧಿಸಲು ಜಿ.ಪಂ. ಸಿಇಒ ಸೂಚನೆ

11:04 PM Dec 29, 2022 | Team Udayavani |

ಮಂಗಳೂರು : ಪರಿಶಿಷ್ಟ ಜಾತಿ ಹಾಗೂ ಪಂಗಡದವರ ಅಭ್ಯುದಯಕ್ಕಾಗಿ ಬಿಡುಗಡೆ ಮಾಡಲಾಗುವ ಎಸ್‌ಸಿಪಿ, ಟಿಎಸ್‌ಪಿ ಅನುದಾನದಲ್ಲಿ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಸಕಾಲದಲ್ಲಿ ಯೋಜನೆ ಅನುಷ್ಠಾನಗೊಳಿಸಿ ಗರಿಷ್ಠ ಪ್ರಗತಿ ಸಾಧಿಸಬೇಕು ಎಂದು ದ.ಕ. ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ| ಕುಮಾರ್‌ ಸೂಚನೆ ನೀಡಿದ್ದಾರೆ.

Advertisement

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ಜರಗಿದ ವಿಶೇಷ ಘಟಕ ಮತ್ತು ಪರಿಶಿಷ್ಟ ವರ್ಗಗಳ ಉಪಯೋಗ ಕಾರ್ಯಕ್ರಮಗಳ ಪ್ರಗತಿ ಪರಿಶೀಲನ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಅರ್ಹ ಫಲಾನುಭವಿಗೆ ಯೋಜನೆಯ ಲಾಭ ಸಿಗಬೇಕು. ಆಯ್ಕೆ ವಿಳಂಬಕ್ಕೆ ಆಸ್ಪದವಾಗದಂತೆ ಗಮನ ಹರಿಸಬೇಕು. ಎಸ್‌ಸಿಪಿ ಹಾಗೂ ಟಿಎಸ್‌ಪಿ ಯೋಜನೆಯಡಿ ಸೂಕ್ತ ಪ್ರಗತಿ ಸಾಧಿಸದ ಇಲಾಖೆಗಳ ಮುಖ್ಯಸ್ಥರಿಗೆ ಕೂಡಲೇ ನೋಟಿಸ್‌ ನೀಡಬೇಕು ಎಂದವರು ಸೂಚನೆ ನೀಡಿದರು.

ಎಡಿಸಿ ಕೃಷ್ಣಮೂರ್ತಿ, ಮಹಾನಗರ ಪಾಲಿಕೆಯ ಉಪ ಆಯುಕ್ತ (ಆಡಳಿತ) ರವಿಕುಮಾರ್‌, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಪಾಪ ಭೋವಿ, ಜಿಲ್ಲಾ ನಗರಾಭಿವೃದ್ದಿ ಕೋಶದ ಯೋಜನ ನಿರ್ದೇಶಕ ಅಭಿಷೇಕ್‌, ಆಹಾರ-ನಾಗರಿಕ ಸರಬರಾಜು ಇಲಾಖೆಯ ಉಪ ನಿರ್ದೇಶಕ ಮಾಣಿಕ್ಯ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next