Advertisement

ಜಿಪಂ ಚುನಾವಣೆಗೆ ಸನ್ನದ್ಧರಾಗಿ: ಗದ್ದಿಗೌಡರ

03:43 PM Mar 01, 2021 | Team Udayavani |

ಬಾಗಲಕೋಟೆ: ಮುಂಬರುವ ಜಿಪಂ ಮತ್ತು ತಾಪಂ ಚುನಾವಣೆ ಎದುರಿಸಲು ಪಕ್ಷದ ಪ್ರತಿಯೊಬ್ಬ ಕಾರ್ಯಕರ್ತರು ಸಿದ್ಧರಾಗಬೇಕು ಎಂದು ಸಂಸದ ಪಿ.ಸಿ. ಗದ್ದಿಗೌಡರ ಹೇಳಿದರು.

Advertisement

ನಗರದ ವೀರಭದ್ರೇಶ್ವರ ಸಾಂಸ್ಕೃತಿಕ ಭವನದಲ್ಲಿ ರವಿವಾರ ಬಿಜೆಪಿ ಜಿಲ್ಲಾ ಕಾರ್ಯಕಾರಿಣಿ ಸಭೆ ಉದ್ಘಾಟಿಸಿ ಅವರು ಮಾತನಾಡಿದರು.ಈಚೆಗೆ ನಡೆದ ಗ್ರಾಪಂ ಚುನಾವಣೆಯಲ್ಲಿ ಬಿಜೆಪಿ ಕಾರ್ಯಕರ್ತರು ಹೆಚ್ಚು ಕ್ರಿಯಾಶೀಲರಾಗಿ ಕೆಲಸ ಮಾಡಿದ್ದಾರೆ. ಇದರಿಂದ ಜಿಲ್ಲೆಯಲ್ಲಿ ಅತಿಹೆಚ್ಚು ಗ್ರಾಪಂಗೆ ಪಕ್ಷದ ಬೆಂಬಲಿತರು ಅಧಿಕಾರಕ್ಕೆ ಬರಲು ಕಾರಣವಾಗಿದೆ ಎಂದರು.

ಬಿಜೆಪಿ ಇಡೀ ಪ್ರಪಂಚದಲ್ಲಿ ದೊಡ್ಡ ಪಕ್ಷವಾಗಿದೆ. ಸದಾ ಸಂಘಟನೆಯಲ್ಲಿರುವ ಪಕ್ಷ ಬಿಜೆಪಿಯಾಗಿದೆ. ಗ್ರಾಮ ಪಂಚಾಯತದಿಂದ ಸಂಸತ್ತಿನವರೆಗೆ ಸಾಮಾನ್ಯ ಕಾರ್ಯಕರ್ತ ಸ್ಪರ್ಧೆ ಮಾಡಿದರೂ ಗೆಲುವು ಸಾಧಿಸಬಹುದು. ಆ ರೀತಿ ಬಿಜೆಪಿ ಪಕ್ಷ ಬಲಿಷ್ಠವಾಗಿದೆ ಎಂದು ಹೇಳಿದರು.

ಪಕ್ಷದಿಂದ ಆಯ್ಕೆಯಾಗಿ ಜನಪ್ರತಿನಿಧಿ ಸ್ಥಾನದ ಅಲಂಕಾರ ಮಾಡುವವರುಮಾಜಿಗಳಾಗಬಹುದು. ಆದರೆ ಪಕ್ಷದಕಾರ್ಯಕರ್ತರು ಮತ್ತು ಪದಾಧಿಕಾರಿಗಳುಎಂದೂ ಮಾಜಿಗಳಾಗಲ್ಲ. ಪಕ್ಷದ ಕಾರ್ಯಕರ್ತರುಪ್ರಾಮಾಣಿಕ ಕೆಲಸ ಮಾಡಿದ್ದರಿಂದ ಬಿಜೆಪಿಇಂದು ಕೇಂದ್ರ ಮತ್ತು ರಾಜ್ಯದಲ್ಲಿ ಅಧಿಕಾರದಚುಕ್ಕಾಣಿ ಹಿಡಿದಿದೆ. ದೇಶದ ಪ್ರಧಾನಿಯವರು ಮಾಡಿದಂತಹ ಜನಪರ ಕಾರ್ಯಕ್ರಮ ಹಾಗೂ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪನವರ ಅಭಿವೃದ್ಧಿ ಕಾರ್ಯಗಳನ್ನು ಜನರಿಗೆ ಮುಟ್ಟಿಸುವಜಾಗೃತಿ ಮೂಡಿಸುವ ಕೆಲಸ ಮಾಡಬೇಕು ಎಂದು ಕಾರ್ಯಕರ್ತರಿಗೆ ತಿಳಿಸಿದರು.

ಶಾಸಕ ದೊಡ್ಡನಗೌಡ ಪಾಟೀಲ ಮಾತನಾಡಿ, ಬಿಜೆಪಿ ಬೆಳವಣಿಗೆಯಾಗುವ ಪಕ್ಷವಾಗಿದೆ. ಕಾರ್ಯಕರ್ತರು ಈಗಿನಿಂದಲೇ ಮುಂಬರುವಜಿಪಂ, ತಾಪಂ ಚುನಾವಣೆಯಲ್ಲಿ ಹೆಚ್ಚು ಸ್ಥಾನಗಳುಬಿಜೆಪಿಗೆ ಬರುವಂತೆ ಕೆಲಸ ಮಾಡಬೇಕು ಎಂದರು.

Advertisement

ಬಿಜೆಪಿ ಜಿಲ್ಲಾಧ್ಯಕ್ಷ ಶಾಂತಗೌಡ ಪಾಟೀಲ ಪ್ರಾಸ್ತಾವಿಕವಾಗಿ ಮಾತನಾಡಿ, ಪಕ್ಷದಲ್ಲಿ ಜವಾಬ್ದಾರಿ ಹುದ್ದೆ ಪಡೆದವರು ಪಕ್ಷವನ್ನು ಬೇರುಮಟ್ಟದಿಂದ ಗಟ್ಟಿಗೊಳಿಸುವ ಕೆಲಸ ಮಾಡಬೇಕು. ಪಕ್ಷದಲ್ಲಿನಕಾರ್ಯಕರ್ತರು ಹುರುಪಿನಿಂದ ಕೆಲಸಮಾಡಬೇಕು. ಪಕ್ಷದಲ್ಲಿ ನಿರಂತರ ಸಂಘಟನೆಇದೆ. ಮುಂಬರುವ ಜಿಲ್ಲಾ ಹಾಗೂ ತಾಲೂಕುಪಂಚಾಯಿತಿ ಚುನಾವಣೆಯಲ್ಲಿ ಪಕ್ಷ ಹೆಚ್ಚಿನ ಸ್ಥಾನಗೆಲ್ಲಬೇಕಾದರೆ ಕಾರ್ಯಕರ್ತರು ಕ್ರಿಯಾಶೀಲವಾಗಿಹಾಗೂ ಪ್ರಾಮಾಣಿಕ ಕೆಲಸ ಮಾಡಬೇಕಾಗಿದೆ ಎಂದು ಹೇಳಿದರು.

ಶಾಸಕ ಡಾ| ವೀರಣ್ಣ ಚರಂತಿಮಠ, ಮಾಜಿ ಶಾಸಕರಾದ ಪಿ.ಎಚ್‌.ಪೂಜಾರ, ರಾಜಶೇಖರ ಶೀಲವಂತ, ಎಂ.ಕೆ. ಪಟ್ಟಣಶೆಟ್ಟಿ, ಬೆಳಗಾವಿ ವಿಭಾಗೀಯ ಪ್ರಭಾರಿಬಸವರಾಜ ಯಂಕಂಚಿ, ಪ್ರಕಾಶ ಅಕ್ಕಲಕೋಟ,ಚಂದ್ರಶೇಖರ ಕವಟಗಿಮಠ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಜು ನಾಯ್ಕರ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next