Advertisement
ಜಿಪಂ ಸಭಾಂಗಣದಲ್ಲಿ ಜರುಗಿದ ಸಾಮಾನ್ಯ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲೆಯ ನೀರಿನ ಸೌಕರ್ಯವಿರುವ ಹಾಗೂ ಕಾಂಪೌಂಡ ಇರುವ ಸರ್ಕಾರಿ ಶಾಲಾ ಕಟ್ಟಡಗಳ ಆವರಣದಲ್ಲಿ ಉದ್ಯಾನವನ ಹಾಗೂ ಕೈತೋಟಗಳನ್ನು ಅತ್ಯಂತ ಶಿಸ್ತುಬದ್ಧ ಹಾಗೂ ಉಂದರವಾಗಿ ನಿರ್ಮಿಸಲು ಅಧಿಕಾರಿಗಳು ಕಾರ್ಯಪ್ರವೃತ್ತರಾಗಬೇಕು. ಕ್ರಿಯಾ ಯೋಜನೆಗಳ ಕುರಿತು ಸ್ಥಾಯಿ ಸಮಿತಿಗೆ ಮಾಹಿತಿ ನೀಡಬೇಕು. ನರೇಗಾ ಯೋಜನೆಯಡಿ ಕೈಗೊಂಡ ಕ್ರಮಗಳ ಬಗ್ಗೆ ಮಾಹಿತಿ ಒದಗಿಸಬೇಕೆಂದು. ಸರ್ಕಾರದ ಯೋಜನೆಗಳ ಅನುಷ್ಠಾನದಲ್ಲಿ ಅ ಧಿಕಾರಿಗಳು ಆಸಕ್ತಿ ವಹಿಸಿ ಯಶಸ್ಸಿಗೆ ಶ್ರಮಿಸಬೇಕು ಎಂದು ನಿರ್ದೇಶನ ನೀಡಿದರು.
Related Articles
Advertisement
ಜಿಲ್ಲಾ ವಯಸ್ಕರ ಶಿಕ್ಷಣ ಇಲಾಖೆಯಲ್ಲಿ ಪ್ರೇರಕ ಹಾಗೂ ಉಪ ಪ್ರೇರಕರಾಗಿ ಕೆಲಸ ಮಾಡಿದವರನ್ನು ಜಿಲ್ಲಾ ಪಂಚಾಯತಿಯಲ್ಲಿ ಗುತ್ತಿಗೆ ಆದಾರದಲ್ಲಿ ಕೆಲಸ ನೀಡುವ ಸಂದರ್ಭದಲ್ಲಿ ಅವರಿಗೆ ಆದ್ಯತೆ ನೀಡಬೇಕೆಂದು ಜಿಪಂ ಅಧ್ಯಕ್ಷ ಈರಪ್ಪ ನಾಡಗೌಡ್ರ ಅವರು ಸಿಇಒ ಅವರಿಗೆ ಸೂಚಿಸಿದರು.
ಈ ಸಂದರ್ಭದಲ್ಲಿ ವಿವಿಧ ಇಲಾಖೆಗಳ ಪ್ರಗತಿಯಕುರಿತು ಚರ್ಚೆ ನಡೆಸಿದರು. ಉಪಾಧ್ಯಕ್ಷೆ ಮಂಜುಳಾಹುಲ್ಲಣ್ಣವರ, ಸಿಇಒ ಭರತ ಎಸ್. ವೇದಿಕೆ ಮೇಲೆ ಉಪಸ್ಥಿತರಿದ್ದರು. ಸದಸ್ಯ ವಾಸಣ್ಣ ಕುರಡಗಿ, ಮಲ್ಲವ್ವ ಬಿಚ್ಚಾರ, ಪಡಿಯಪ್ಪ ಪೂಜಾರ, ರೇಣುಕಾ ಅವರಾದಿ, ರೇಖಾ ಅಳವಂಡಿ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.
5 ವರ್ಷಗಳಾದರೂ ಸಿಗದ ಮಾಹಿತಿ :
ಅಧಿಕಾರವಧಿ ಮುಗಿಯುತ್ತಿದ್ದರೂ ಅಧಿಕಾರಿಗಳು ತಮ್ಮ ಇಲಾಖೆಗಳಲ್ಲಿರುವ ಯೋಜನೆಗಳ ಮಾಹಿತಿಯನ್ನು ಜಿಪಂ ಸದಸ್ಯರಿಗೆ ನೀಡುತ್ತಿಲ್ಲ ಎಂದು ಸದಸ್ಯರು ಧ್ವನಿ ಎತ್ತಿದರು. ಅದಕ್ಕೆ ಧ್ವನಿಗೂಡಿಸಿದ ಅಧ್ಯಕ್ಷ ಈರಪ್ಪ ನಾಡಗೌಡರ, ಆದಷ್ಟು ಬೇಗ ಸದಸ್ಯಯರು ಕೋರುವ ಮಾಹಿತಿ ಒದಗಿಸುವಂತೆ ಆದೇಶಿಸಿದರು.