Advertisement
ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿಅಧ್ಯಕ್ಷೆ ಅಶ್ವಿನಿ ಅಧ್ಯಕ್ಷತೆಯಲ್ಲಿ ಮಂಗಳವಾರ ನಡೆದ ಸಾಮಾನ್ಯ ಸಭೆಯಲ್ಲಿ ಮಾತನಾಡಿದಸದಸ್ಯೆ ಮಂಜುಳಾ, ಮಹದೇಶ್ವರ ಬೆಟ್ಟ ಅರಣ್ಯಪ್ರದೇಶದೊಳಗಿರುವ ಅನೇಕ ಗ್ರಾಮಗಳಜನರು ಕಾಯಿಲೆಯ ಚಿಕಿತ್ಸೆಗಾಗಿ ದೂರದಊರುಗಳಿಗೆ ಹೋಗಬೇಕಾಗಿದೆ. ಮಲೆಮಹದೇಶ್ವರ ಬೆಟ್ಟದಲ್ಲೂ ಸುಸಜ್ಜಿತ ಆಸ್ಪತ್ರೆ ಇಲ್ಲ.ಜಿಲ್ಲಾ ಉಸ್ತುವಾರಿ ಸಚಿವರು ವರ್ಷದ ಹಿಂದೆಗೋಪಿನಾಥಂನಲ್ಲಿ ವಾಸ್ತವ್ಯ ಹೂಡಿದ್ದರು. ಆ ಸಮಯದಲ್ಲಿ ಗೋಪಿನಾಥಂನಲ್ಲಿ ಆಸ್ಪತ್ರೆನಿರ್ಮಿಸುವುದಾಗಿ ಭರವಸೆ ನೀಡಿದ್ದರು. ಆದರೆ, ಆ ಭರವಸೆ ಈಡೇರಲಿಲ್ಲ. ಹಾಗಾಗಿಮುಖ್ಯ ಗ್ರಾಮಗಳಲ್ಲಿ ಪ್ರಾಥಮಿಕ ಆರೋಗ್ಯಕೇಂದ್ರ ನಿರ್ಮಿಸಿ ಎಂದು ಒತ್ತಾಯಿಸಿದರು.
Related Articles
Advertisement
ಸಭೆಯಲ್ಲಿ ಜಿಪಂ ಅಧ್ಯಕ್ಷೆ ಅಶ್ವಿನಿ, ಉಪಾಧ್ಯಕ್ಷೆ ಶಶಿಕಲಾ ಸೇರಿದಂತೆ ಸದಸ್ಯರು, ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಜರಿದ್ದರು.
ಕುಡಿವ ನೀರಿಗೆ 6 ಕೋಟಿ ಅನುದಾನಕ್ಕೆ ಪ್ರಸ್ತಾವನೆ :
ಹನೂರು ಭಾಗದ ಕ್ಷೇತ್ರಗಳ ಸದಸ್ಯರಾದ ಮಂಜುಳಾ, ಮರಗದಮಣಿ, ಬಸವರಾಜು, ಲೇಖಾ ಮಾತನಾಡಿ,ಈಗಾಗಲೇ ಬೇಸಿಗೆ ಆರಂಭವಾಗಿದೆ. ಹನೂರು ತಾಲೂಕಿನಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರಿದೆ.ಮಾರ್ಟಳ್ಳಿ ವ್ಯಾಪ್ತಿಯಲ್ಲಿ 1 ಸಾವಿರ ಅಡಿ ಕೊರೆದರೂನೀರು ಬರುತ್ತಿಲ್ಲ. ಮುಂದಿನ ದಿನಗಳಲ್ಲಿ ಇನ್ನೂ ಸಮಸ್ಯೆಉಲ್ಪಣವಾಗಲಿದೆ. ಕುಡಿಯುವ ನೀರಿನ ಸಮಸ್ಯೆಬಗೆಹರಿಸಲು ಪರ್ಯಾಯ ವ್ಯವಸ್ಥೆಗೆ ವಿಶೇಷವಾಗಿ 5 ರಿಂದ 6 ಕೋಟಿ ಅನುದಾನ ನೀಡಲು ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಲು ಒತ್ತಾಯಿಸಿದರು.
ನೀರು ನೈರ್ಮಲ್ಯ ಇಲಾಖೆ ಎಂಜಿನಿಯರ್ ಶಿವಶಂಕರ್ ಮಾತನಾಡಿ, ಮಾರ್ಟಳ್ಳಿ ವ್ಯಾಪ್ತಿಯಲ್ಲಿ ಖಾಸಗಿ 18 ಪಂಪ್‌ಸೆಟ್‌ಗಳನ್ನು ಗುರುತಿಸಿದ್ದೇವೆ. ಅಲ್ಲಿಂದ ನೀರುಪೂರೈಕೆಗೆ ಕ್ರಮ ಕೈಗೊಳ್ಳುತ್ತಿದ್ದೇವೆ ಎಂದರು. ಸದಸ್ಯ ಕೆ.ಪಿ.ಸದಾಶಿವಮೂರ್ತಿ ಮಾತನಾಡಿ, ಚಾಮರಾಜನಗರ ತಾಲೂಕಿನ ಆಲೂರು, ಕರಿಯನಕಟ್ಟೆಸೇರಿದಂತೆ ಇತರೆ ಗ್ರಾಮಗಳ ವ್ಯಾಪ್ತಿಯಲ್ಲಿ ನಿರ್ಮಾಣಮಾಡಿರುವ ಓವರ್ ಹೆಡ್ ಟ್ಯಾಂಕ್‌ಗಳಿಗೆ ನೀರು ಪೂರೈಕೆಮಾಡಿಲ್ಲ. ಇದರಿಂದ ಈ ಭಾಗದ ಜನರಿಗೆ ಕುಡಿಯುವ ನೀರಿನ ಸಮಸ್ಯೆ ಎದುರಾಗಿದೆ. ಈ ಸಂಬಂಧ ಹಲವುಬಾರಿ ಸೂಚನೆ ನೀಡಿದರು ಸಹ ಸಂಬಂಧಪಟ್ಟ ಅಧಿಕಾರಿಗಳು ಕ್ರಮವಹಿಸಿಲ್ಲ ಎಂದು ದೂರಿದರು.
ಇದಕ್ಕೆ ಪ್ರತಿಕ್ರಿಯಿಸಿದ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಅಧಿಕಾರಿ ಶಿವಶಂಕರ್, ಈಸಂಬಂಧ ಆದಷ್ಟು ಬೇಗ ಓವರ್‌ಹೆಡ್ ಟ್ಯಾಂಕ್‌ಗಳಿಗೆ ನೀರು ಪೂರೈಕೆ ಮಾಡುವ ನಿಟ್ಟಿನಲ್ಲಿ ಕ್ರಮ ವಹಿಸಲಾಗುವುದು ಎಂದು ಆಗ್ರಹಿಸಿದರು.
ಗುಂಡ್ಲುಪೇಟೆ: ಹೊರಗುತ್ತಿಗೆ ಅವ್ಯವಹಾರ ತನಿಖೆಗೆ ಆಗ್ರಹ :
ಗುಂಡ್ಲುಪೇಟೆ ತಾಲೂಕು ಆಸ್ಪತ್ರೆಯಲ್ಲಿ ಹೊರಗುತ್ತಿಗೆ ಸಿಬ್ಬಂದಿಗೆ ಸೂಕ್ತ ಸೌಲಭ್ಯ ನೀಡುತ್ತಿಲ್ಲ. ಅಲ್ಲದೇ ಬೇರೆಯವರ ಹೆಸರಲ್ಲಿ ಸಂಬಳ ನೀಡಲಾಗುತ್ತಿದೆ. ಇದರ ಹಿಂದೆ ಅಧಿಕಾರಿಗಳ ಕೈವಾಡವಿದ್ದು ಅಂತಹ ಅಧಿಕಾರಿಗಳನ್ನು ಅಮಾನತುಗೊಳಿಸಬೇಕು ಎಂದು ಸದಸ್ಯ ಕೆರೆಹಳ್ಳಿ ನವೀನ್ ಒತ್ತಾಯಿಸಿದರು. ಹೊರಗುತ್ತಿಗೆಆಧಾರದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗೆ ಪಿಎಫ್,ಇಎಸ್‌ಐ ಕೊಡುತ್ತಿಲ್ಲ. ಅಲ್ಲದೇ ಬೇರೆಯವರ ಹೆಸರಲ್ಲಿ ಇಲ್ಲಿನಸಿಬ್ಬಂದಿಗೆ ಸಂಬಳ ಕೊಡಲಾಗುತ್ತಿದೆ ಎಂದು ದೂರಿದರು.
ಹೊರಗುತ್ತಿಗೆ ಆಧಾರದಲ್ಲಿ ನೇಮಿಸಿಕೊಂಡಿರುವ ಏಜೆನ್ಸಿಯವರು ಸಿಬ್ಬಂದಿಗೆ ಸೂಕ್ತ ಗುರುತಿನ ಚೀಟಿ ನೀಡಿಲ್ಲ. ಅಲ್ಲದೇ ಹಾಜರಾತಿ ಪುಸ್ತಕವನ್ನು ನಿರ್ವಹಿಸಿಲ್ಲ. ಇದರ ಹಿಂದೆ ತಾಲೂಕು ವೈದ್ಯಾಧಿಕಾರಿಯವರ ಕೈವಾಡವಿದೆ. ಆದ್ದರಿಂದಕೂಡಲೇ ಶಾಮೀಲಾಗಿರುವ ಅಧಿಕಾರಿಗಳನ್ನು ಅಮಾನತುಗೊಳಿಸಬೇಕು. ಜೊತೆಗೆ ಸಂಬಂಧಪಟ್ಟ ಏಜೆನ್ಸಿಯನ್ನುರದ್ದುಗೊಳಿಸಿ ಕಪ್ಪು ಪಟ್ಟಿಯಲ್ಲಿ ಸೇರಿಸಬೇಕು ಎಂದು ಆಗ್ರಹಿಸಿದರು. ಇದಕ್ಕೆ ಇತರೆ ಸದಸ್ಯರು ಹಾಗೂ ಗುಂಡ್ಲುಪೇಟೆ ತಾಪಂ ಅಧ್ಯಕ್ಷ ಮಧುಶಂಕರ್ ದನಿಗೂಡಿಸಿದರು.
ಇದಕ್ಕೆ ಪ್ರತಿಕ್ರಿಯಿಸಿದ ಡಿಎಚ್‌ಒ ಡಾ.ಎಂ.ಸಿ.ರವಿ, ಈ ಸಂಬಂಧ ಈಗಾಗಲೇ ದಾಖಲೆ ತರಿಸಿಕೊಂಡಿದ್ದೇನೆ. ಅಲ್ಲಿನ ಅಧಿಕಾರಿಗಳು ಹಾಗೂ ಕಚೇರಿ ಸಿಬ್ಬಂದಿಗೆ ಲಿಖೀತ ಹೇಳಿಕೆ ನೀಡುವಂತೆ ನೋಟಿಸ್ ಸಹ ನೀಡಲಾಗಿದೆ. ಕೂಲಂಕಷವಾಗಿ ಪರಿಶೀಲಿಸಿ ತನಿಖೆ ಮಾಡಿ ಕ್ರಮ ಕೈಗೊಳ್ಳಲಾಗುವುದು ಎಂದರು.
ಜಿಪಂ ಸಿಇಒ ಹರ್ಷಲ್ ಬೋಯರ್ ಮಾತನಾಡಿ, ಏಜೆನ್ಸಿಯನ್ನು ಕಪ್ಪುಪಟ್ಟಿಯಲ್ಲಿ ಸೇರಿಸುವುದರ ಜೊತೆಗೆ ಶಾಮೀಲಾಗಿರುವ ಅಧಿಕಾರಿಗಳನ್ನು ಅಮಾನತುಗೊಳಿಸುವಂತೆ ಮೇಲಧಿಕಾರಿಗಳಿಗೆ ಆದೇಶಿಸಿ ವರದಿ ಕಳುಹಿಸುವಂತೆ ಡಿಎಚ್‌ಒ ಅವರಿಗೆ ಸೂಚನೆ ನೀಡಿದರು.