Advertisement
ನಗರದ ಜಿಪಂ ಸಭಾಂಗಣದಲ್ಲಿ ಮಂಗಳವಾರ ಏರ್ಪಡಿಸಿದ 2ನೇ ತ್ರೆçಮಾಸಿಕ ಕೆಡಿಪಿ ಸಭೆಯ ಅಧ್ಯಕ್ಷತೆವಹಿಸಿ ಅವರು ಮಾತನಾಡಿ, ಜಿಪಂ ಸಭೆ ನಡೆದು ಅಭಿವೃದ್ಧಿ ಕಾಮಗಾರಿಗಳನ್ನು ನಡೆಸಲು ಕ್ರಿಯಾ ಯೋಜನೆ ತಯಾರಿಸಲು ಅನುಮೋದನೆ ನೀಡದೇ ಇರುವುದು ಸರಿಯಲ್ಲ. ನ. 20ರಂದು ಜಿಪಂ ಸಾಮಾನ್ಯ ಸಭೆ ನಡೆಸಲು ನಿಗದಿಪಡಿಸಲಾಗಿದ್ದು, ಈ ಸ ಭೆಯಲ್ಲಿ ಪಕ್ಷಾತೀತವಾಗಿ ಎಲ್ಲರೂ ಸಹಕರಿಸಬೇಕು ಎಂದು ಸಚಿವರು ಸಭೆಯಲ್ಲಿ ಹಾಜರಿದ್ದ ಶಾಸಕರಿಗೆ ಮನವಿ ಮಾಡಿದರು.
Related Articles
Advertisement
ವಿಧಾನಪರಿಷತ್ ಶಾಸಕ ತಿಪ್ಪೇಸ್ವಾಮಿ ಮಾತನಾಡಿ,ಜಿಲ್ಲೆಯಲ್ಲಿ ಕಟ್ಟಡ ಕಾರ್ಮಿಕರ ನೋಂದಣಿ ಸಮರ್ಪಕವಾಗಿ ನಡೆಯುತ್ತಿಲ್ಲವೆಂದು ಸಚಿವರಿಗೆ ಗಮನಕ್ಕೆ ತಂದಾಗ ಪ್ರತಿಕ್ರಿಯಿಸಿದ ಸಚಿವರು ಕಾರ್ಮಿಕರಕಲ್ಯಾಣ ಯೋಜನೆಗಳ ಬಗ್ಗೆ ಜನ ಜಾಗೃತಿ ಮೂಡಿಸಬೇಕಲ್ಲದೆ ನೋಂದಾಯಿತ ಗುತ್ತಿಗೆದಾರರಿಂದ ಕಟ್ಟಡ ಕಾರ್ಮಿಕರು ಹಾಗೂ ಗಾರೆ ಕೆಲಸಗಾರರ ಮಾಹಿತಿ ಪಡೆದು ಕಾರ್ಮಿಕರ ನೋಂದಣಿಗೆ ಕ್ರಮವಹಿಸುವಂತೆ ಕಾರ್ಮಿಕ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಬ್ಯಾಂಕಿನಲ್ಲಿ ರೈತರಿಗೆ ಸಾಲ ನೀಡುವಾಗ ಸಾಲದ ಅರ್ಜಿಯ ಮೇಲೆ ನಿರ್ದೇಶಕರ ಸಹಿಯನ್ನು ಪಡೆಯಲೇಬೇಕೆಂಬ ನಿಯಮ ವನ್ನು ಕೈಬಿಡಲು ಪಿಕಾರ್ಡ್ ಬ್ಯಾಂಕ್‌ಗಳಿಗೆ ಸೂಚನೆ ನೀಡಬೇಕು ಎಂದು ಕಾಸ್ಕರ್ಡ್ ಬ್ಯಾಂಕಿನ ಜಿಲ್ಲಾ ವ್ಯಸ್ಥಾಪಕರಿಗೆ ಸಚಿವರು ನಿರ್ದೇಶನ ನೀಡಿದರು.
ಜಲಜೀವನ್ ಮಿಷನ್ ಕಾರ್ಯಕ್ರಮದಡಿ ಮೊದಲ ಹಂತವಾಗಿ ಓವರ್ ಹೆಡ್ ಟ್ಯಾಂಕ್ ಇರುವ ಹಳ್ಳಿಗಳ ಪ್ರತಿಯೊಂದು ಮನೆ-ಮನೆಗೂ ನಲ್ಲಿಗಳ ಮೂಲಕ ನೀರು ಸರಬರಾಜು ಮಾಡಲಾಗುವುದು. ಇಂತಹ ಹಳ್ಳಿಗಳನ್ನು ಗುರುತಿಸುವಂತೆ ಸಚಿವರು ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ತುಮಕೂರು ಜಿಲ್ಲೆಯಲ್ಲಿ ನಿವೇಶನ ರಹಿತರಿಗೆನಿವೇಶನಕಲ್ಪಿಸಲುಕೈಗೊಂಡಿರುವಕ್ರಮಗಳ ಮಾಹಿತಿ ನೀಡುವಂತೆ ಸಂಸದ ನಾರಾಯಣಸ್ವಾಮಿ ಅವರು ಜಿಲ್ಲಾಧಿಕಾರಿಗಳಿಗೆ ತಿಳಿಸಿದರು.
ಪೊದೆಗಳ ನಿವಾರಣೆಗೆ ಕ್ರಿಯಾಯೋಜನೆ: ಜಿಲ್ಲೆಯಲ್ಲಿ ಚಿರತೆಗಳು ಜನ-ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿರುವ ಪ್ರಕರಣಗಳ ಬಗ್ಗೆ ಕುಣಿಗಲ್ ಶಾಸಕ ರಂಗನಾಥ್ ಹಾಗೂ ತುರುವೇಕೆರೆ ಶಾಸಕ ಜಯರಾಮ್ ಅವರು ಸಭೆಯಲ್ಲಿ ಸಚಿವರ ಗಮನ ಸೆಳೆದರು.
ಚಿರತೆ ಹಾವಳಿ ಇರುವ ಪ್ರದೇಶಗಳಲ್ಲಿ ಬೆಳೆದಿರುವ ಪೊದೆ(ಜಂಗಲ್)ಗಳನ್ನು ತೆರವುಗೊಳಿಸಲು ಗ್ರಾಪಂಗಳು ಕ್ರಿಯಾ ಯೋಜನೆ ರೂಪಿಸಬೇಕು. ಅಲ್ಲದೆ ಹಿಡುವಳಿ ಜಮೀನಿನಲ್ಲಿರುವ ಪೊದೆಗಳನ್ನು ಜಮೀನಿನ ಮಾಲೀಕರು ತೆರವುಗೊಳಿಸಬೇಕು. ಒಂದು ವೇಳೆ ತೆರವುಗೊಳಿಸದಿದ್ದಲ್ಲಿ ಕಂದಾಯ ಇಲಾಖೆ ಕ್ರಮ ಕೈಗೊಳ್ಳಬೇಕೆಂದು ಸಚಿವರು ಸಿಇಓಗಳಿಗೆ ಸೂಚನೆ ನೀಡಿದರು.
ಜಲಜೀವನ್ ಮಿಷನ್ ಯೋಜನೆಯಡಿ ಜಿಲ್ಲೆಯ ಶಾಲೆ, ಅಂಗನವಾಡಿ, ಆಶ್ರಯ ಮತ್ತು ವಸತಿಶಾಲೆಗಳಿಗೆಕೊಳವೆ ನೀರು ಸಂಪರ್ಕ ಕಲ್ಪಿಸುವ ವಿಶೇಷ ಆಂದೋಲನಕ್ಕೆ ಸಚಿವರು ಇದೇ ಸಂದರ್ಭದಲ್ಲಿ ಚಾಲನೆ ನೀಡಿದರು.
ಸಭೆಯಲ್ಲಿಸಂಸದನಾರಾಯಣಸ್ವಾಮಿ,ಶಾಸಕರಾದ ಜ್ಯೋತಿಗಣೇಶ್, ಮಸಾಲಾ ಜಯರಾಂ,ಡಾ ರಾಜೇಶ್ ಗೌಡ, ಡಾ. ರಂಗನಾಥ್, ಬೆಮೆಲ್ ಕಾಂತರಾಜ್,ಚಿದಾನಂದ ಗೌಡ, ಜಿಪಂ ಅಧ್ಯಕ್ಷೆ ಲತಾ ರವಿಕುಮಾರ್, ಉಪಾಧ್ಯಕ್ಷೆ ಶಾರದಾ ನರಸಿಂಹಮೂರ್ತಿ, ಜಿಲ್ಲಾಧಿಕಾರಿ ಡಾ. ಕೆ. ರಾಕೇಶ್ ಕುಮಾರ್ ಇತರರಿದ್ದರು.
ಭೂ ಸ್ವಾಧೀನಕ್ಕೆ ಪರಿಹಾರಕಂಡುಕೊಳ್ಳಿ : ಎತ್ತಿನ ಹೊಳೆ ಯೋಜನೆಯ ಸರ್ವೆ ಕಾರ್ಯ ನಡೆಯುತ್ತಿದ್ದು, ಮುಂಬರುವ ಜನವರಿ ತಿಂಗಳೊಳಗೆ ಅಧಿಸೂಚನೆ ಹೊರಡಿಸಲಾಗುವುದು. ಜಂಟಿ ಸರ್ವೆ ಇನ್ನೊಂದು ವಾರದಲ್ಲಿ ಮುಗಿಯಲಿದೆ ಎಂದು ವಿಶೇಷ ಭೂಸ್ವಾಧೀನ ಅಧಿಕಾರಿ ಸಭೆಗೆ ಮಾಹಿತಿ ನೀಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು ತಿಪಟೂರು ತಾಲೂಕಿನ ನಾಲ್ಕು ಹಳ್ಳಿ ಗಳಲ್ಲಿ ಭೂ ಸ್ವಾಧೀನ ಪ್ರಕ್ರಿಯೆಗೆ ಸಮಸ್ಯೆಯಿದೆ.ಇದನ್ನು ಸ್ಥಳೀಯ ಶಾಸಕರೊಂದಿಗೆ ಚರ್ಚಿಸಿ ಪರಿಹಾರ ಕಂಡುಕೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಿದರು. ತುಮಕೂರು-ರಾಯದುರ್ಗ,ತುಮಕೂರು-ದಾವಣಗೆರೆ ರೈಲ್ವೆ ಯೋಜನೆಗೆ ಅಗತ್ಯವಿರುವ ಭೂಮಿಯನ್ನು ಬೇಗ ಭೂ ಸ್ವಾಧೀನಪಡಿಸಿಕೊಂಡು ಹಸ್ತಾಂತರ ಮಾಡಬೇಕು. ರೈಲ್ವೆ ಯೋಜನೆಗೆ ಸಂಬಂಧಿಸಿದಂತೆ ಭೂ ಸ್ವಾಧೀನಕ್ಕೆ ಯಾವುದೇ ಹಣದ ಕೊರತೆ ಇಲ್ಲ ಎಂದು ಸಚಿವರು ತಿಳಿಸಿದರು.