ಜೋಯಿಡಾ: ಜೋಯಿಡಾ ತಾಲೂಕಿನ ಅವೇಡಾ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಬಾಡಗುಂದ ಎಂಬಲ್ಲಿ ವಿಸಿಲಿಂಗ್ ವುಡ್ ರೆಸಾರ್ಟಿನಲ್ಲಿ ಬೆಂಕಿ ಅವಘಡ ಸಂಭವಿಸಿದ ಘಟನೆ ಶುಕ್ರವಾರ ಸಂಜೆ ನಡೆದಿದೆ.
Advertisement
ರೆಸಾರ್ಟಿನ ನಾಲ್ಕನೇ ಮಹಡಿಯಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದ್ದು, ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಆದರೆ ವಿವಿಧ ಪಿಠೋಪಕರಣಗಳು, ಎಲೆಕ್ಟ್ರಾನಿಕ್ ವಸ್ತುಗಳು, ಸೋಲಾರ್ ವಸ್ತುಗಳು ಬೆಂಕಿಗೆ ಆಹುತಿಯಾಗಿದೆ ಎಂದು ತಿಳಿದುಬಂದಿದೆ.
ಸ್ಥಳಕ್ಕೆ ಅಗ್ನಿಶಾಮಕ ದಳ ಭೇಟಿ ನೀಡಿ ಬೆಂಕಿ ನಂದಿಸಲು ಸಹಕರಿಸಿದರು. ವಿದ್ಯುತ್ ಶಾರ್ಟ್ ಸರ್ಕ್ಯೂಟಿನಿಂದಾಗಿ ಅವಘಡ ಸಂಭವಿಸಿರಬಹುದೆಂದು ಅಂದಾಜಿಸಲಾಗುತ್ತಿದೆ.