Advertisement

ಜಿಪಂ ಸದಸ್ಯ ಶಿವಣ್ಣ ಬಿಜೆಪಿಗೆ ಸೇರ್ಪಡೆ

12:21 PM Apr 15, 2018 | Team Udayavani |

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಸ್‌.ಎಂ.ಕೃಷ್ಣ ಬೆಂಬಲಿಗ ಮಂಡ್ಯ ಜಿಲ್ಲಾ ಪಂಚಾಯತಿ ಸದಸ್ಯ ಶಿವಣ್ಣ ಶನಿವಾರ ಬಿಜೆಪಿ ಸೇರಿದರು.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಅವರು ಪಕ್ಷದ ಧ್ವಜವನ್ನು ಶಿವಣ್ಣ ಅವರಿಗೆ ನೀಡುವ ಮೂಲಕ ಬಿಜೆಪಿಗೆ ಆತ್ಮೀಯವಾಗಿ ಸ್ವಾಗತಿಸಿದರು.

Advertisement

ಪಕ್ಷದ ಸಿದ್ಧಾಂತಗಳು ಹಾಗೂ ಸಮರ್ಥ ನಾಯಕತ್ವವನ್ನು ಮೆಚ್ಚಿ ಅನ್ಯ ಪಕ್ಷಗಳಿಂದ ಮುಖಂಡರು ಬಿಜೆಪಿಗೆ ಸೇರ್ಪಡೆಯಾಗುತ್ತಿದ್ದಾರೆ. ಇನ್ನು ಹಲವರು ಬರುವವರಿದ್ದಾರೆ ಎಂದು ಯಡಿಯೂರಪ್ಪ ತಿಳಿಸಿದರು. ಕೇಂದ್ರ ಸಚಿವರಾದ ಅನಂತಕುಮಾರ್‌, ಡಿ.ವಿ.ಸದಾನಂದಗೌಡ, ಶಾಸಕ ಸಿ.ಪಿ.ಯೋಗೇಶ್ವರ್‌ ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next