Advertisement
ಜಿಲ್ಲೆಯ ಅಂಗನವಾಡಿ ಕೇಂದ್ರಗಳಲ್ಲಿ ಮೂಲ ಸೌಕರ್ಯಗಳ ಕೊರತೆಯ ಜೊತೆಗೆ ಮಕ್ಕಳಿಗೆ ಹಾಗೂ ಗರ್ಭಿಣಿಯರಿಗೆ ಕಳಪೆ ಗುಣಮಟ್ಟದ ಆಹಾರ ವಿತರಿಸಲಾಗುತ್ತಿದೆ ಎಂಬ ಆರೋಪಗಳು ಸಾರ್ವಜನಿಕ ವಲಯದಲ್ಲಿ ಕೇಳಿ ಬಂದ ಹಿನ್ನೆಲೆಯಲ್ಲಿ ಜಿಪಂ ಅಧ್ಯಕ್ಷ ಪಿ.ಎನ್.ಕೇಶವರೆಡ್ಡಿ ನೇತೃತ್ವದಲ್ಲಿ ಜಿಪಂ ಹಿರಿಯ ಅಧಿಕಾರಿಗಳ ತಂಡ ಕೋರೇನಹಳ್ಳಿ ಅಂಗನವಾಡಿ ಕೇಂದ್ರಕ್ಕೆ ದಿಢೀರ್ ಭೇಟಿ ನೀಡಿತ್ತು.
Related Articles
Advertisement
ಪ್ರಾಥಮಿಕ ಶಾಲೆಗಳಲ್ಲೂ ಕಟ್ಟಡ ನಿರ್ಮಾಣ: ಈಗಾಗಲೇ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಮೂಲಕ ಸ್ವಂತ ಕಟ್ಟಡ ಹಾಗೂ ನಿವೇಶನ ಇಲ್ಲದ ಅಂಗನವಾಡಿ ಕೇಂದ್ರಗಳನ್ನು ಗುರುತಿಸಿ ಕಟ್ಟಡಗಳ ನಿರ್ಮಾಣಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ.ಉದ್ಯೋಗ ಖಾತ್ರಿ ಯೋಜನೆಯನ್ನು ಸದ್ಬಳಕೆ ಮಾಡಿಕೊಂಡು ಅಂಗನವಾಡಿ ಕೇಂದ್ರಗಳಿಗೆ ಕಟ್ಟಡ, ಕಾಂಪೌಂಡ್ ಹಾಗೂ ಸ್ವತ್ಛ ಭಾರತ ಯೋಜನೆಯಡಿ ಶೌಚಾಲಯ ವ್ಯವಸ್ಥೆ ಕಲ್ಪಿಸಲಾಗುತ್ತಿದೆ. ನಿವೇಶನದ ಕೊರತೆ ಇರುವ ಕಡೆ ಪ್ರಾಥಮಿಕ ಶಾಲೆಗಳ ಆವರಣಗಳಲ್ಲಿ ಕಟ್ಟಡ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.
ಈ ಸಂದರ್ಭದಲ್ಲಿ ಜಿಪಂ ಉಪ ಕಾರ್ಯದರ್ಶಿ ಡಾ.ಸಿ.ಸಿದ್ದರಾಮಯ್ಯ, ಮುಖ್ಯ ಲೆಕ್ಕಾಧಿಕ್ಷಕ ಡಾ.ಎಂ.ಎಚ್.ನಾಗೇಶ್ ಸೇರಿದಂತೆ ಜಿಪಂ ಅಧಿಕಾರಿಗಳು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು, ಸ್ಥಳೀಯ ಗ್ರಾಪಂ ಸದಸ್ಯರು, ಚುನಾಯಿತ ಜನಪ್ರತಿನಿಧಿಗಳು ಮತ್ತಿತರರು ಉಪಸ್ಥಿತರಿದ್ದರು.
ಜಿಲ್ಲೆಯ ಅಂಗನವಾಡಿ ಕೇಂದ್ರಗಳಿಗೆ ಪೂರೈಕೆಯಾಗುವ ಪೌಷ್ಟಿಕ ಆಹಾರ ಗುಣಮಟ್ಟದಿಂದ ಕೂಡಿರಬೇಕು. ಈ ಬಗ್ಗೆ ಗುತ್ತಿಗೆದಾರರು ಬೇಜವಾಬ್ದಾರಿ ತೋರಿದರೆ ಶಿಸ್ತು ಕ್ರಮ ಕೈಗೊಳ್ಳಲಾಗುವುದು. ಅಂಗನವಾಡಿ ಕೇಂದ್ರಗಳಲ್ಲಿ ಶುಚಿತ್ವಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು ಅಂಗನವಾಡಿ ಕೇಂದ್ರಗಳ ಬಗ್ಗೆ ಹೆಚ್ಚಿನ ನಿಗಾ ವಹಿಸಬೇಕು. ಅಂಗನವಾಡಿ ಕೇಂದ್ರಗಳಲ್ಲಿ ಏನೇ ತೊಂದರೆಯಾದರೂ ಸಂಬಂಧಪಟ್ಟ ಅಧಿಕಾರಿಗಳನ್ನು ನೇರ ಹೊಣೆ ಮಾಡಲಾಗುವುದು.-ಪಿ.ಎನ್.ಕೇಶವರೆಡ್ಡಿ, ಜಿಪಂ ಅಧ್ಯಕ್ಷರು