Advertisement

12-18 ವರ್ಷದವರಿಗೆ ಝೈಡಸ್ ಕ್ಯಾಡಿಲಾ ಲಸಿಕೆ ಸೆಪ್ಟೆಂಬರ್ ನಲ್ಲಿ ಲಭ್ಯ : ಎನ್‌.ಕೆ. ಆರೋರಾ

03:56 PM Jul 09, 2021 | Team Udayavani |

ನವ ದೆಹಲಿ : ದೇಶದಲ್ಲಿ ಕೋವಿಡ್ ಸೋಂಕಿನ ಪ್ರಮಾಣ ಇಳಿಕೆಯಾಗುತ್ತಿದ್ದು, ಕೇಂದ್ರ ಸರ್ಕಾರ ಈಗ ಸಂಪೂರ್ಣವಾಗಿ ಲಸಿಕಾ ಅಭಿಯಾನದತ್ತ ಗಮನ ಹರಿಸುತ್ತಿದೆ.

Advertisement

ಲಸಿಕೆಗಳ ಪೂರೈಕೆಯಲ್ಲಿ ಕೇಂದ್ರ ಆರೋಗ್ಯ ಸಚಿವಾಲಯ ನಿರಂತರವಾಗಿ ಕಾರ್ಯ ನಿರ್ವಹಿಸಿತ್ತಿದ್ದು, ಮಕ್ಕಳಿಗ ಹಾಗೂ ಯುವಕರಿಗೆ ಲಸಿಕೆಗಳನ್ನು ನೀಡುವ ವಿಚಾರದಲ್ಲಿ ಪ್ರಾಯೋಗಿಕ ಪರೀಕ್ಷೆಗಳನ್ನು ಮಾಡುವುದರ ಸಲುವಾಗಿ ಕಾರ್ಯೋನ್ಮುಖವಾಗಿದೆ.

ಇದನ್ನೂ ಓದಿ : ಕೇಂದ್ರ ಸಂಪುಟದಲ್ಲಿ ರಾಜ್ಯಕ್ಕೆ 4 ಸಚಿವ ಸ್ಥಾನ : ಪ್ರಧಾನಿಯವರಿಗೆ ರಾಜ್ಯ ಬಿಜೆಪಿ ಅಭಿನಂದನೆ

ಸೆಪ್ಟೆಂಬರ್ ವೇಳೆಗೆ 12ರಿಂದ 18 ವರ್ಷ ವಯಸ್ಸಿನವರಿಗೆ ಝೈಡಸ್ ಕ್ಯಾಡಿಲಾ ಕೋವಿಡ್ ಲಸಿಕೆಯು ಲಭ್ಯವಾಗಲಿದೆ ಎಂದು ಲಸಿಕೆ ನಿರ್ವಹಣೆಗೆ ಸಂಬಂಧಿಸಿದ ರಾಷ್ಟ್ರೀಯ ತಜ್ಞರ ಸಮಿತಿ ಮುಖ್ಯಸ್ಥ ಡಾ. ಎನ್‌.ಕೆ. ಆರೋರಾ ಇಂದು (ಶುಕ್ರವಾರ, ಜುಲೈ 9) ಮಾಹಿತಿ ನೀಡಿದ್ದಾರೆ.

ರಾಷ್ಟ್ರೀಯ ಸುದ್ದಿ ಸಂಸ್ಥೆ ಎನ್ ಡಿ ಟಿವಿ ಯೊಂದಿಗೆ ಮಾತನಾಡಿದ ಅವರು, ಝೈಡಸ್ ಕ್ಯಾಡಿಲಾ ಲಸಿಕೆಯ ತುರ್ತು ಬಳಕೆಗೆ ಕೆಲವೇ ವಾರಗಳಲ್ಲಿ ಅನುಮೋದನೆ ದೊರೆಯಲಿದೆ ಎಂದು ಅವರು ಹೇಳಿದ್ದಾರೆ.

Advertisement

ಇನ್ನು, ಸೆಪ್ಟೆಂಬರ್‌ ಅಂತ್ಯದ ವೇಳೆಗೆ 12 ರಿಂದ 18 ವರ್ಷ ವಯಸ್ಸಿನವರಿಗೆ ಕೋವ್ಯಾಕ್ಸಿನ್ ಲಸಿಕೆ ಕೂಡ ಲಭ್ಯವಾಗುವ ನಿರೀಕ್ಷೆ ಇದ್ದು, ಈ ವಯಸ್ಸಿನವರಿಗಾಗಿ ಕೋವ್ಯಾಕ್ಸಿನ್ ಲಸಿಕೆಯ ಮೂರನೇ ಹಂತದ ಪ್ರಯೋಗ ನಡೆಯುತ್ತಿದೆ ಎಂದು ಅವರು ವಿವರಿಸಿದ್ದಾರೆ.

ಜನವರಿ ಅಥವಾ ಫೆಬ್ರವರಿ ಸುಮಾರಿಗೆ ಎರಡು ವರ್ಷ ಮೇಲ್ಪಟ್ಟ ಮಕ್ಕಳಿಗೂ ಲಸಿಕೆಗಳು ಲಭ್ಯವಾಗುವ ಸಾಧ್ಯತೆ ಇದೆ ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ : ಮನುಷ್ಯನ ಜೀವನದಲ್ಲಿ ಒಮ್ಮೆ ಹೂಬಿಡುವ ಬಿದಿರಿನ ವೈಶಿಷ್ಟ್ಯವೇನು ?

Advertisement

Udayavani is now on Telegram. Click here to join our channel and stay updated with the latest news.

Next